ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.5 ಹಾಗೂ 6ರಂದು ನಗರ ಪ್ರವಾಸ ಕೈಗೊಂಡಿದ್ದಾರೆ.

ಅಂದು ಬೆಳಿಗ್ಗೆ 10.55ಕ್ಕೆ ಮಂಡಕಳ್ಳಿ ವಿಮಾನನಿಲ್ದಾಣಕ್ಕೆ ಬಂದಿಳಿಯುವ ಅವರು, ಕುಲಾಲಗುಂಡ ಬ್ರಹ್ಮಾರ್ಯ ಕುಂಬಾರರ ಸಂಘದಿಂದ ವಿನೋಬಾ ರಸ್ತೆಯ ಕಲಾಮಂದಿರದಲ್ಲಿ ಆಯೋಜಿಸಿರುವ ಅಮೃತ ಮಹೋತ್ಸವ ಹಾಗೂ ರಾಜ್ಯ ಕುಂಬಾರರ ಮಹಾಸಮ್ಮೇಳನದಲ್ಲಿ ಭಾಗವಹಿಸುವರು. ನಂತರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವಾಸ್ತವ್ಯ ಹೂಡುವರು.

6ರಂದು ಬೆಳಿಗ್ಗೆ 10.30ಕ್ಕೆ ಕೆ.ಶಿವಕುಮಾರ್ ಅಭಿನಂದನಾ ಸಮಿತಿ ಹಾಗೂ ದಲಿತ ಸಂಘಟನೆಗಳ ಒಕ್ಕೂಟದಿಂದ ಮಾನಸಗಂಗೋತ್ರಿಯ ಸೆನೆಟ್ ಭವನದಲ್ಲಿ ನಡೆಯಲಿರುವ ವಿಧಾನಪರಿಷತ್ ಸದಸ್ಯ ಕೆ.ಶಿವಕುಮಾರ್ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಳ್ಳುವರು. ನಂತರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಮಧ್ಯಾಹ್ನ 3ಕ್ಕೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ತೆರಳುವರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.