ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸೆ. 26 ಹಾಗೂ 27ರಂದು ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
26ರಂದು ಬೆಳಿಗ್ಗೆ 11ಕ್ಕೆ ಮೈಸೂರಿನ ಉತ್ತನಹಳ್ಳಿಯ ಮಾರಮ್ಮದೇವಿ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಅವರು, ನಂತರ ಗ್ರಾಮದಲ್ಲಿನ ಅಂಬೇಡ್ಕರ್ ಭವನ ಉದ್ಘಾಟನೆ, ಕನಕದಾಸ ಮತ್ತು ಸಂಗೊಳ್ಳಿ ರಾಯಣ್ಣ ಪುತ್ಥಳಿಗಳ ಶಂಕುಸ್ಥಾಪನೆ ನೆರವೇರಿಸಲಿದ್ದು, ಪಶುಪಾಲನಾ ಇಲಾಖೆಯ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 4ಕ್ಕೆ ನಗರದ ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿ ನಡೆಯಲಿರುವ 37ನೇ ಪ್ರೊಬೆಷನರಿ ಉಪ ಅಧೀಕ್ಷಕರು ಮತ್ತು ಅಬಕಾರಿ ಅಧೀಕ್ಷಕ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಮಹದೇಶ್ವರ ಬೆಟ್ಟಕ್ಕೆ ತೆರಳಿ ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.
27ರಂದು ಬೆಳಿಗ್ಗೆ 9.50ಕ್ಕೆ ಮಹದೇಶ್ವರ ಬೆಟ್ಟದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ಹಾಗೂ ನಂತರದಲ್ಲಿ ಬೆಟ್ಟದ ಅಭಿವೃದ್ದಿ ಪ್ರಾಧಿಕಾರದ ಸಭೆಯಲ್ಲಿ ಭಾಗಿ ಆಗಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಚಾಮರಾಜ ನಗರದ ಕಾಳಿದಾಸ ವಿದ್ಯಾರ್ಥಿನಿಲಯದಲ್ಲಿ ಕನಕ ವಾಣಿಜ್ಯ ಸಂಕೀರ್ಣದ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಜಿ.ಪಂ. ಸಭಾಂಗಣದಲ್ಲಿ ಚಾಮರಾಜನಗರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.