ಪಠ್ಯೇತರ ಚಟುವಟಿಕೆಯಿಂದ ಕೌಶಲ: ಡಾ.ಸಿ.ಬಸವರಾಜು

ಮೈಸೂರು: ‘ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ವೃತ್ತಿಪರತೆ ಮತ್ತು ಕೌಶಲ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ’ ಎಂದು ಕಾನೂನು ವಿಶ್ವವಿದ್ಯಾಲಯದ ಡಾ.ಸಿ.ಬಸವರಾಜು ತಿಳಿಸಿದರು.
ಇಲ್ಲಿನ ಶಾರದಾ ವಿಲಾಸ ಕಾನೂನು ಕಾಲೇಜಿನಲ್ಲಿ ಈಚೆಗೆ ನಡೆದ ವಾರ್ಷಿಕ ಪಠ್ಯಪೂರಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.
‘ಕ್ರೀಡೆಯು ದೈಹಿಕ ಮತ್ತು ಮಾನಸಿಕ ಸದೃಢತೆಯನ್ನು ಹೆಚ್ಚಿಸುತ್ತದೆ. ಹೀಗಾಗಿ, ಪಠ್ಯದ ಕಲಿಕೆಗೆ ಕೊಡುವಷ್ಟೇ ಮಹತ್ವವನ್ನು ಪಠ್ಯೇತರ ವಿಷಯಕ್ಕೂ ಕೊಡಬೇಕು’ ಎಂದು ಸಲಹೆ ನೀಡಿದರು.
ನ್ಯಾಯಾಧೀಶರು ಹಾಗೂ ಸರ್ಕಾರಿ ಸಹಾಯಕ ಅಭಿಯೋಜಕರಾಗಿ ಆಯ್ಕೆಯಾಗಿರುವ ಕಾಲೇಜಿನ ಹಳೆಯ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ವಕೀಲ ಎಸ್.ಲೋಕೇಶ್ ಮಾತನಾಡಿದರು. ಶಾರದಾ ವಿಲಾಸ ವಿದ್ಯಾಸಂಸ್ಥೆಗಳ ಗೌರವ ಕಾರ್ಯದರ್ಶಿ ಎನ್.ಚಂದ್ರಶೇಖರ್ ಅಧ್ಯಕ್ಷತೆ ವಹಿಸಿದ್ದರು.
ಪ್ರಾಂಶುಪಾಲೆ ವಾಣಿ ಸಿ., ಸಹಾಯಕ ಪ್ರಾಧ್ಯಾಪಕರಾದ ಸಪ್ನಾ ಎ.ಪಿ., ದಿಶಾ ಜಿ.ಮಾರಿಗೋಲಿ. ಗೀತಾ ಎಚ್.ಜೆ., ವಿಶಾಖ್ ಶ್ರೀವತ್ಸ ವೈ.ಪಿ. ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.