ಮೈಸೂರು: ‘ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದಿಂದ ನಗರದ ಅರಮನೆ ಆವರಣದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನ ಬಳಿ ಅ.1ರಂದು ಬೆಳಿಗ್ಗೆ 10.30ಕ್ಕೆ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ ಹಮ್ಮಿಕೊಳ್ಳಲಾಗಿದೆ’ ಎಂದು ಸಂಘದ ಗೌರವ ಕಾರ್ಯದರ್ಶಿ ಕೆ.ಬಿ.ಲೋಹಿತ್ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ‘ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಉದ್ಘಾಟಿಸುವರು. ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸೋಮನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಸಂಘದ ಅಧ್ಯಕ್ಷ ಎ.ಎಸ್.ಪರಮೇಶ್, ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ.ದಿನೇಶ್, ಸಿಇಒ ಕೆ.ಜಿ.ಜಗದೀಶ್ ಉಪಸ್ಥಿತರಿರುವರು’ ಎಂದು ತಿಳಿಸಿದರು.
‘ಈ ವೇಳೆ ಸುಮಾರು 15 ಸಾವಿರ ಮಂದಿಗೆ ಕಪ್ ಕಾಫಿಯನ್ನು ಉಚಿತವಾಗಿ ವಿತರಿಸಲಾಗುವುದು’ ಎಂದರು.

ಅಧ್ಯಕ್ಷ ಎ.ಎಸ್.ಪರಮೇಶ್, ಎಂ.ಜೆ.ಸಚಿನ್, ಕೃಷ್ಣಮೂರ್ತಿ ಖಂಡಿಗೆ, ಅರುಣ್ಕುಮಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.