ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್.ಧ್ರುವನಾರಾಯಣ ಪುಣ್ಯಸ್ಮರಣೆ: ಮಾ.12ರಂದು ಹೆಗ್ಗವಾಡಿಗೆ ಸಿಎಂ ಸಿದ್ದರಾಮಯ್ಯ

Published 10 ಮಾರ್ಚ್ 2024, 14:08 IST
Last Updated 10 ಮಾರ್ಚ್ 2024, 14:08 IST
ಅಕ್ಷರ ಗಾತ್ರ

ನಂಜನಗೂಡು: ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಮಾಜಿ ಸಂಸದ ದಿ. ಆರ್.ಧ್ರುವನಾರಾಯಣ ಅವರ ಮೊದಲನೇ ವರ್ಷದ ಪುಣ್ಯ ಸ್ಮರಣೆಯನ್ನು ಚಾಮರಾಜನಗರ ಜಿಲ್ಲೆಯ ಹೆಗ್ಗವಾಡಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ಹಲವಾರು ಸಚಿವರು, ಶಾಸಕರುಗಳು ಪುಣ್ಯ ಸ್ಮರಣೆ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ ಎಂದು ಶಾಸಕ ದರ್ಶನ್‌ ಧ್ರುವನಾರಾಯಣ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ದರ್ಶನ್‌ ಧ್ರುವನಾರಾಯಣ, ಮಾರ್ಚ್‌ 12 ರ ಮಂಗಳವಾರ ಬೆಳಗ್ಗೆ 10.30ಕ್ಕೆ ಹೆಗ್ಗವಾಡಿ ಗ್ರಾಮದಲ್ಲಿ ನಡೆಯಲಿರುವ ದಿ. ಆರ್.ಧ್ರುವನಾರಾಯಣ ಅವರ ನುಡಿ ನಮನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ,ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಸೇರಿದಂತೆ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು, ಆರ್.ಧ್ರುವನಾರಾಯಣ್ ಅವರ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಅಭಿಮಾನಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ‘ ಎಂದರು.

‘ಸ್ಥಳೀಯ ಜಾನಪದ ಕಲಾವಿದರಿಂದ ಗೀತ ಗಾಯನ, ಸುಗಮ ಸಂಗೀತ ಕಾರ್ಯಕ್ರಮ, ಮದ್ಯಾಹ್ನ 1ಗಂಟೆಗೆ ಒಂದೂವರೆ ಲಕ್ಷಕ್ಕೂ ಹೆಚ್ಚು ಜನರಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT