ಮೈಸೂರು: ‘ಯುದ್ಧದ ಕಾರಣದಿಂದ ವಾಣಿಜ್ಯ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು, ಮುಂದಿನ ದಿನಗಳಲ್ಲಿ ಹೋಟೆಲ್ ಉದ್ಯಮ ಮುಚ್ಚುವ ಸ್ಥಿತಿ ನಿರ್ಮಾಣವಾಗಿದೆ’ ಎಂದು ಜಿಲ್ಲಾ ಹೋಟೆಲ್ ಮಾಲಿಕರ ಸಂಘದ ಅಧ್ಯಕ್ಷ ಸಿ.ನಾರಾಯಣಗೌಡ ತಿಳಿಸಿದ್ದಾರೆ.

‘ಬಿಪಿಸಿಎಲ್, ಇಂಡಿಯನ್ ಆಯಿಲ್ ಕಾರ್ಪೊರೇಷನ್, ಎಚ್ಪಿಸಿಎಲ್ ಕಂಪನಿ ಸಿಲಿಂಡರ್ ಸರಬರಾಜು ಮಾಡುತ್ತಿದ್ದವು. ಆದರೆ, ಯುದ್ಧದಿಂದ ಕಚ್ಛಾ ಸಾಮಾಗ್ರಿ ಬರುತ್ತಿಲ್ಲ ಎಂಬ ಕಾರಣ ನೀಡಿ 2– 3 ದಿನಗಳಿಂದ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಮಂಗಳವಾರದಿಂದ ಶೇ 50ರಷ್ಟು ಸರಬರಾಜು ಕಡಿಮೆಯಾಗುವ ಸೂಚನೆ ಇದೆ. ನಂಜನಗೂಡು ರಸ್ತೆಯಲ್ಲಿರುವ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಸೋಮವಾರದಿಂದ ಮುಚ್ಚಿದೆ. ವಿತರಕರು ಲೋಡ್ ನೀಡುತ್ತಿಲ್ಲ ಎನ್ನುತ್ತಿದ್ದಾರೆ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

‘ಒಂದು ಸಿಲಿಂಡರ್ ಬೆಲೆ ₹ 300 ಹೆಚ್ಚಾಗಿತ್ತು. ₹150 ರಿಯಾಯಿತಿಯೂ ರದ್ದಾಗಿತ್ತು. ಈಗ ಮತ್ತಷ್ಟು ಬೆಲೆ ಹೆಚ್ಚಳವಾಗುವ ಸಾಧ್ಯತೆ ಇದೆ. ಪ್ರವಾಸಿ ಕೇಂದ್ರದಲ್ಲಿ ಶೇ 50ರಷ್ಟು ಜನ ಹೋಟೆಲ್ ಆಹಾರ ಅವಲಂಬಿಸಿದ್ದಾರೆ. ಜಿಲ್ಲೆಯಲ್ಲಿ 1,500 ಹೋಟೆಲ್ ಉದ್ಯಮಿಗಳಿದ್ದು, 25ಸಾವಿರ ನೌಕರರಿದ್ದಾರೆ. ಸಿಲಿಂಡರ್ ಕೊರತೆಯಿಂದ ಅಷ್ಟೂ ಕುಟುಂಬಗಳು ಸಂಕಷ್ಟದಲ್ಲಿದೆ. ಹೋಟೆಲ್ ಮಾಲಿಕರ ಸಂಘವು ಕೇಂದ್ರ ಸರ್ಕಾರದ ಪೆಟ್ರೋಲಿಯಂ ಸಚಿವರಿಗೆ ಪತ್ರ ಬರೆದು ಸಿಲಿಂಡರ್ ಸರಬರಾಜಿಗೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದೆ. ಆದರೆ, ಉದ್ಯಮದ ಬಗ್ಗೆ ಚಿಂತೆಯಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.