ಕೆ.ಆರ್.ನಗರ: ‘ತಾಲ್ಲೂಕಿನ ಮಂಚನಹಳ್ಳಿಯಲ್ಲಿ ಸರ್ವ ಜನಾಂಗ ವಾಸವಾಗಿದ್ದು, ಹೆಚ್ಚಿನ ಅನುದಾನ ತಂದು ಗ್ರಾಮ ಸಮಗ್ರ ಅಭಿವೃದ್ಧಿಪಡಿಸಲಾಗುತ್ತದೆ’ ಎಂದು ಶಾಸಕ ಡಿ.ರವಿಶಂಕರ್ ಭರವಸೆ ನೀಡಿದರು.

ತಾಲ್ಲೂಕಿನ ಮಂಚನಹಳ್ಳಿ ಗ್ರಾಮದಲ್ಲಿ ₹1ಕೋಟಿ ಮೊತ್ತದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಬುಧವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

‘ಗ್ರಾಮದ ಅಭಿವೃದ್ಧಿಗೆ ಈಗಾಗಲೇ ₹5 ಕೋಟಿ ಅನುದಾನಕ್ಕೆ ಡಿಪಿಆರ್ ತಯಾರಿಸಿದ್ದು, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು 2 ಲಕ್ಷ ಲೀಟರ್ ಸಾಮರ್ಥ್ಯದ ಟ್ಯಾಂಕ್ ನಿರ್ಮಿಸಲಾಗುತ್ತದೆ. ಗ್ರಾಮದ ಕೆರೆಯಲ್ಲಿನ ಹೂಳೆತ್ತಿಸುವ ಕೆಲಸ ಕೈಗೆತ್ತಿಕೊಳ್ಳಲಾಗುತ್ತಿದ್ದು, ಸ್ಮಶಾನ ಅಭಿವೃದ್ಧಿಪಡಿಸಲಾಗುತ್ತದೆ. ಇಲ್ಲಿನ ಆಂಜನೇಯ ಸ್ವಾಮಿ ದೇವಾಲಯ ಅಭಿವೃದ್ಧಿಗೊಳಿಸಿ ಲೋಕಾರ್ಪಣೆ ಮಾಡಲಾಗುತ್ತದೆ, ಹಂತ ಹಂತವಾಗಿ ಕ್ಷೇತ್ರದ ಸಮಗ್ರ ಅಭಿವೃದ್ಧಿಪಡಿಸಲಾಗುತ್ತದೆ’ ಎಂದು ಭರವಸೆ ನೀಡಿದರು.

ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡದಂತೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸೂಚಿಸಿದರು.

ಕುರುಬರ ಸಂಘದ ತಾಲ್ಲೂಕು ಅಧ್ಯಕ್ಷ ಚೀರಹಳ್ಳಿ ಶಿವಣ್ಣ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಎಂ.ಎಸ್.ಅನಂತು ಮಾತನಾಡಿದರು.

ಕೆಪಿಸಿಸಿ ಸದಸ್ಯ ಸಿ.ಪಿ.ರಮೇಶ್ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಸ್.ಮಹದೇವ್, ಉದಯಶಂಕರ್, ನಗರ ಘಟಕದ ಅಧ್ಯಕ್ಷ ಎಂ.ಜೆ.ಕುಮಾರ್, ವಕ್ತಾರ ಸಯ್ಯದ್ ಜಾಬೀರ್, ಹಂಪಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಚ್ ಪಿ.ಪ್ರಶಾಂತ್, ನಿರ್ದೇಶಕ ದೇವರಾಜು, ಇಒ ರವಿಕುಮಾರ್, ಪಾಲಾಕ್ಷ, ಮೀನುಗಾರರ ಸಹಕಾರ ಸಂಘದ ಅಧ್ಯಕ್ಷ ಬೋರಣ್ಣ, ಮುಖಂಡರಾದ ಮಂಚನಹಳ್ಳಿ ರಘು, ಹರಿರಾಜು, ಮಂಚನಹಳ್ಳಿ ಧನು, ಈರೇಗೌಡ, ಹಲಗೇಗೌಡ, ಮಂಜುನಾಥ್, ಮಹೇಶ್, ಕಾಳಪ್ಪ, ಬಸವರಾಜು, ಲೋಕೋಪಯೋಗಿ ಇಲಾಖೆಯ ಎಇಇ ಸುಮಿತಾ, ಪಿಡಿಒ ಅಶ್ವಿನಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.