ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈಫಲ್ಯ ಮುಚ್ಚಿಟ್ಟುಕೊಳ್ಳಲು ಕೇಂದ್ರದ ವಿರುದ್ಧ ಕಾಂಗ್ರೆಸ್ ಆರೋಪ: ಕಟೀಲ್‌

Published 11 ಫೆಬ್ರುವರಿ 2024, 15:59 IST
Last Updated 11 ಫೆಬ್ರುವರಿ 2024, 15:59 IST
ಅಕ್ಷರ ಗಾತ್ರ

ಮೈಸೂರು: ‘ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಟ್ಟುಕೊಳ್ಳಲು ಕಾಂಗ್ರೆಸ್‌ನವರು ಕೇಂದ್ರದ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದಾರೆ’ ಎಂದು ಸಂಸದ ನಳಿನ್‌ಕುಮಾರ್‌ ಕಟೀಲ್‌ ಆರೋಪಿಸಿದರು.

ಇಲ್ಲಿ ಪತ್ರಕರ್ತರೊಂದಿಗೆ ಭಾನುವಾರ ಮಾತನಾಡಿದ ಅವರು, ‘ಬಿಟ್ಟಿ ಭಾಗ್ಯಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಆ ಭಾಗ್ಯಗಳನ್ನು ಒದಗಿಸುವಲ್ಲಿ ಹಾಗೂ ಬರಗಾಲ ನಿರ್ವಹಿಸುವಲ್ಲೂ ವಿಫಲವಾಗಿದೆ. ಆರ್ಥಿಕ ಸ್ಥಿತಿ ಕಾಪಾಡಿಕೊಳ್ಳುವಲ್ಲೂ ಸೋತಿದೆ. ತಪ್ಪು ಮುಚ್ಚಿಟ್ಟುಕೊಳ್ಳಲು ಪೋಸ್ಟರ್‌ ಅಂಟಿಸಿ ಪ್ರತಿಭಟನೆ ನಡೆಸುವುದು ಮಾಡುತ್ತಿದೆ. ಈ ಸರ್ಕಾರ ಪೋಸ್ಟರ್‌ಗೆ ಸೀಮಿತವಾಗಿದೆ’ ಎಂದು ಟೀಕಿಸಿದರು.

‘ಕಾಂಗ್ರೆಸ್‌ ಜವಾಬ್ದಾರಿಯುತ ಪಕ್ಷವಾಗಿದ್ದರೆ, ದೇಶ ವಿಭಜನೆಯ ಮಾತನ್ನಾಡಿರುವ ಸಂಸದ ಡಿ.ಕೆ.ಶಿವಕುಮಾರ್‌ ವಿರುದ್ಧ ಈ ವೇಳೆಗಾಗಲೇ ಕ್ರಮ ಕೈಗೊಳ್ಳಬೇಕಾಗಿತ್ತು. ಸ್ವಾತಂತ್ರ್ಯ ಪೂರ್ವದಲ್ಲೇ ವಿಭಜನೆಯ ಮಾತುಗಳನ್ನಾಡಿರುವ ಪಕ್ಷವದು. ಭಾರತ–ಪಾಕಿಸ್ತಾನ ಎಂದು ವಿಭಜಿಸಿದೆ. ಅದರಲ್ಲಿ ಎತ್ತಿದ ಕೈ ಆ ಪಕ್ಷದ್ದು’ ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT