ಮೈಸೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷ ಮತ್ತು ಕಾರ್ಯಾಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಜಿಲ್ಲೆಯಿಂದ 3 ಸಾವಿರ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ ತಿಳಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜು. 11ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷರಾಗಿ ಈಶ್ವರ್ ಖಂಡ್ರೆ ಅಧಿಕಾರ ಸ್ವೀಕಾರ ಮಾಡಲಿದ್ದು, ನಮ್ಮೆಲ್ಲರ ಬೆಂಬಲ ಸೂಚಿಸುವ ನಿಟ್ಟಿನಲ್ಲಿ ಭಾಗಿಗಳಾಗಲಿದ್ದೇವೆ’ ಎಂದರು.

‘ಗ್ರಾಮಾಂತರ ವಿಭಾಗದ 8 ವಿಧಾನಸಭಾ ಕ್ಷೇತ್ರಗಳು ಮತ್ತು ನಗರ ವಿಭಾಗದ 3 ಕ್ಷೇತ್ರಗಳಿಂದ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಈ ಸಂಬಂಧ ಪೂರ್ವ ಸಿದ್ಧಾತ ಸಭೆ ನಡೆಸಲಿದ್ದೇವೆ’ ಎಂದು ಹೇಳಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯ ಕುಮಾರ್ ಮಾತನಾಡಿ, ಹಾಲಿ ಮತ್ತು ಮಾಜಿ ಶಾಸಕರು ವಾಹನಗಳ ವ್ಯವಸ್ಥೆ ಮಾಡಲಿದ್ದಾರೆ. ಈ ನಿಟ್ಟನಲ್ಲಿ ತಾಲ್ಲೂಕು ಕೇಂದ್ರಗಳಲ್ಲೂ ಸಭೆ ನಡೆಯಲಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.