ಮೈಸೂರು: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತದಾರರು ಬಿಜೆಪಿ ಬೆಂಬಲಿಸುವ ಮೂಲಕ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ಮತ ಚಲಾಯಿಸಿದ್ದಾರೆ. ಹೀಗಾಗಿ ಈ ಯೋಜನೆಗಳನ್ನು ನಿಲ್ಲಿಸುವುದು ಒಳ್ಳೆಯದು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಎಂ. ಲಕ್ಷ್ಮಣ ಹೇಳಿದರು.

' ಚುನಾವಣೆ ಸಂದರ್ಭ ಬಿಜೆಪಿಯವರು ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ್ದು, ಅದನ್ನು ರದ್ದುಮಾಡಲು ಒತ್ತಾಯಿಸಿದ್ದರು. ಜನ ಬಿಜೆಪಿ ಪರ ಮತ ಚಲಾಯಿಸಿದ್ದಾರೆ ಎಂದರೆ ಗ್ಯಾರಂಟಿ ವಿರುದ್ಧವಾಗಿ ಇದ್ದಾರೆ ಎಂದರ್ಥ. ಹೀಗಾಗಿ ಪಂಚ ಗ್ಯಾರಂಟಿ ಯೋಜನೆಗಳ ಜಾರಿ ಸಂಬಂಧ ಪುನರಾವಲೋಕನಕ್ಕೆ ಮುಖ್ಯಮಂತ್ರಿಗಳನ್ನು ಒತ್ತಾಯಿಸಲಾಗುವುದು' ಎಂದು ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.