ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಿ.ಜೆ.ವಿಜಯ್‌ ಕುಮಾರ್‌ಗೆ ಪರಿಷತ್‌ ಸದಸ್ಯ ಸ್ಥಾನ ನೀಡಿ: ಡಿ.ಟಿ.ಸ್ವಾಮಿ

ಕಾರ್ಯಕರ್ತರ ಸಭೆಯಲ್ಲಿ ಮುಖಂಡರ ಒತ್ತಾಯ
Published 25 ಮೇ 2024, 4:28 IST
Last Updated 25 ಮೇ 2024, 4:28 IST
ಅಕ್ಷರ ಗಾತ್ರ

ಪಿರಿಯಾಪಟ್ಟಣ: ‘ಕಾಂಗ್ರೆಸ್‌ನಿಂದ ಡಾ.ಬಿ.ಜೆ.ವಿಜಯ ಕುಮಾರ್‌ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಆಯ್ಕೆ ಮಾಡಬೇಕು’ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಟಿ.ಸ್ವಾಮಿ ಆಗ್ರಹಿಸಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಒತ್ತಾಯಿಸಿದರು.

‘ತಾಲ್ಲೂಕಿನ ಭೂತನಹಳ್ಳಿಯ ವಿಜಯಕುಮಾರ್ ಅವರು ಜಿಲ್ಲಾ ಕಾಂಗ್ರೆಸ್ ಗ್ರಾಮಾಂತರ ಘಟಕದ ಅಧ್ಯಕ್ಷರಾಗಿ ಯಾವುದೇ ಕಳಂಕವಿಲ್ಲದೆ ಪ್ರಾಮಾಣಿಕತೆಯಿಂದ ಪಕ್ಷವನ್ನು ಸಂಘಟಿಸುತ್ತಿದ್ದಾರೆ. ಅವರ ಅಧ್ಯಕ್ಷತೆಯಲ್ಲಿ ಪಕ್ಷವು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಒಟ್ಟು 11 ಕ್ಷೇತ್ರಗಳಲ್ಲಿ 8ರಲ್ಲಿ ಜಯ ಸಾಧಿಸುವ ಮೂಲಕ ಶೇ 62 ರಷ್ಟು ಮತವನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಪಡೆದಿದ್ದಾರೆ’ ಎಂದರು.

‘ಲೋಕಸಭಾ ಚುನಾವಣೆಯಲ್ಲಿ ಮೈಸೂರು –ಕೊಡಗು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿ.ಜೆ.ವಿಜಯಕುಮಾರ್‌ ಹೆಸರು ಮುಂಚೂಣಿಯಲ್ಲಿ ಇತ್ತಾದರೂ ಹೈಕಮಾಂಡ್ ನಿರ್ದೇಶನ ಮತ್ತು ಸೂಚನೆಯಂತೆ ಎಂ.ಲಕ್ಷ್ಮಣ ಅಭ್ಯರ್ಥಿಯಾದರು. ಅವರ ಗೆಲುವಿಗೆ ಒಗ್ಗಟ್ಟಿನಿಂದ ದುಡಿದಿದ್ದಾರೆ’ ಎಂದರು.

ಬೆಟ್ಟದಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಹಮತ್ ಜಾನ್ ಬಾಬು ಮಾತನಾಡಿ, ತಾಲ್ಲೂಕು ಕಾಂಗ್ರೆಸ್ ಘಟಕದಿಂದ ಈಗಾಗಲೇ ಸಚಿವರಾದ ಕೆ.ವೆಂಕಟೇಶ್, ಡಾ. ಎಚ್.ಸಿ.ಮಹದೇವಪ್ಪ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದು, ಅವರಿಂದ ಸಕಾರಾತ್ಮಕ ಭರವಸೆ ಸಿಕ್ಕಿದೆ’ ಎಂದು ತಿಳಿಸಿದರು.

‘ಮೇ 27 ರಂದು ಕೆಪಿಸಿಸಿ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಿದ್ದೇವೆ’ ಎಂದು ಮಾಹಿತಿ ನೀಡಿದರು.

ಮೃಗಾಲಯ ಪ್ರಾಧಿಕಾರದ ಮಾಜಿ ಸದಸ್ಯ ಬಿ.ಎನ್.ಕರಿಗೌಡ, ಕೆಪಿಸಿಸಿ ಸದಸ್ಯ ಅನಿಲ್ ಕುಮಾರ್, ಬಿ.ಜೆ.ಬಸವರಾಜ್, ಕಾನೂರು ಗೋವಿಂದೇಗೌಡ, ಪಿ.ಮಹದೇವ್, ಶೇಖರ್ ಮಾತನಾಡಿದರು.

ಸಭೆಯಲ್ಲಿ ಬೆಟ್ಟದಪುರ ಮುಖಂಡರಾದ ಕಾನೂರು ಗೋವಿಂದೇಗೌಡ, ಪಿ.ಪಿ.ಮಹದೇವ್, ಕೆ.ಹೊಲದಪ್ಪ, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಅಶೋಕ್ ಕುಮಾರ್ ಗೌಡ ಮುಖಂಡರಾದ, ಆರ್.ಎಸ್.ಮಹದೇವ್, ಡಿ.ಎ.ಜವರಪ್ಪ, ರಾಜಶೇಖರ್, ಪಿ.ಪಿ.ಮಹದೇವ್, ಶೇಖರ್, ಪುಟ್ಟಯ್ಯ, ರಾಮಚಂದ್ರ, ಎಚ್.ಟಿ.ಪರಮೇಶ್, ನಾಗಣ್ಣ, ಹೆಚ್‌.ಕೆ.ಮಂಜುನಾಥ್, ಪಿ.ಎಸ್.ವಿಷಕಂಠಯ್ಯ, ಪುಟ್ಟರಾಜು, ಶಿವಣ್ಣ, ರಾಜಯ್ಯ, ಮಹದೇವ್, ದೇವರಾಜ್‌  ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT