ಶುಕ್ರವಾರ, 13 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯಪಾಲರ ನಡೆಗೆ ಖಂಡನೆ: ಕೆ.ಆರ್.ನಗರದಲ್ಲಿ ಕಾಂಗ್ರೆಸ್‌ ಪ್ರತಿಭಟನೆ

Published 17 ಆಗಸ್ಟ್ 2024, 14:25 IST
Last Updated 17 ಆಗಸ್ಟ್ 2024, 14:25 IST
ಅಕ್ಷರ ಗಾತ್ರ

ಕೆ.ಆರ್.ನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲು (ಪ್ರಾಸಿಕ್ಯೂಷನ್) ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಇಲ್ಲಿನ ಪುರಸಭೆ ವೃತ್ತದಲ್ಲಿ ಶನಿವಾರ ಟೈರ್‌ ಸುಟ್ಟು ಹಾಗೂ ರಾಜ್ಯಪಾಲರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಇಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು, ಮೈಸೂರು-ಹಾಸನ ರಸ್ತೆ, ಗರುಡಗಂಬ ಮೂಲಕ ಪುರಸಭೆ ವೃತ್ತಕ್ಕೆ ತೆರಳಿ ಮಾನವ ಸರಪಳಿ ನಿರ್ಮಿಸಿ ರಾಜ್ಯಪಾಲರು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ಮಿನಿ ವಿಧಾನಸೌಧದ ಮುಂಭಾಗ ಕೆಲ ಹೊತ್ತು ಮೈಸೂರು-ಹಾಸನ ರಸ್ತೆ ತಡೆದು ಪ್ರತಿಭಟನೆ ಮಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಲು ಕಾನೂನು ಬಾಹಿರವಾಗಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರನ್ನು ಕೂಡಲೇ ವಜಾಗೊಳಿಸಬೇಕು ಎಂದು ಒತ್ತಾಯಿಸಿ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಸ್.ಮಹದೇವ್, ಉದಯಶಂಕರ್, ನಗರ ಘಟಕದ ಅಧ್ಯಕ್ಷ ಎಂ.ಜೆ.ರಮೇಶ್, ವಕ್ತಾರ ಸಯ್ಯದ್ ಜಾಬೀರ್, ಕುರುಬರ ಸಂಘದ ಅಧ್ಯಕ್ಷ ಚೀರ್ನಹಳ್ಳಿ ಶಿವಣ್ಣ, ಪುರಸಭೆ ಸದಸ್ಯರಾದ ಕೋಳಿ ಪ್ರಕಾಶ್, ಎಂ.ನಟರಾಜ್, ಶಂಕರ್, ಶಿವು, ಮುಖಂಡರಾದ ಲೋಕೇಶ್, ಮಾರ್ಚಹಳ್ಳಿ, ಶಿವರಾಮು, ಜಿ.ಆರ್.ರಾಮೇಗೌಡ, ರುದ್ರಮೂರ್ತಿ, ಹೆಬ್ಬಾಳು ವೇಣು, ಜಗದೀಶ್, ಅಪ್ಪಾಜಿಗೌಡ, ಹರೀಶ್, ಹೆಬ್ಬಾಳು ನಾಗೇಂದ್ರ, ಮೂಡಲಕೊಪ್ಪಲು ಕೃಷ್ಣೇಗೌಡ, ಗೀತಾ ಮಹೇಶ್, ಸುಧಾಕರ್, ಸರಿತಾ ಜವರಪ್ಪ, ಪ್ರಸನ್ನ, ಡಿ.ಕೆ.ಕೊಪ್ಪಲು ರಾಜಯ್ಯ, ರಾಮಯ್ಯ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT