ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ್ ಜೋಡೊ | ಮೈಸೂರಿಗೆ ಆಗಮಿಸಿದ ಸೋನಿಯಾ ಗಾಂಧಿ

Last Updated 3 ಅಕ್ಟೋಬರ್ 2022, 12:21 IST
ಅಕ್ಷರ ಗಾತ್ರ

ಮೈಸೂರು: ಸಂಸದ ರಾಹುಲ್ ಗಾಂಧಿ ‌ನಡೆಸುತ್ತಿರುವ ಭಾರತ್ ಜೋಡೊ ಯಾತ್ರೆಯಲ್ಲಿ ‌ಭಾಗವಹಿಸುವ ಸಂಬಂಧ ಪಕ್ಷದ ನಾಯಕಿ ಸೋನಿಯಾ ಗಾಂಧಿ ಸೋಮವಾರ ಮಧ್ಯಾಹ್ನ ವಿಶೇಷ ವಿಮಾನದಲ್ಲಿ‌ ಇಲ್ಲಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದರು.

ಈ ವೇಳೆ ಹಾಜರಿದ್ದ ಕೆಪಿಸಿಸಿ‌ ಅಧ್ಯಕ್ಷ ಡಿ.ಕೆ.ಶಿವಕುಮಾರ್, ‌ಪಕ್ಷದ ಮೈಸೂರು ಜಿಲ್ಲಾ ಗ್ರಾಮಾಂತರ ಘಟಕದ ಅಧ್ಯಕ್ಷ ಬಿ.ಜೆ.ವಿಜಯಕುಮಾರ್, ನಗರ ಘಟಕದ ಅಧ್ಯಕ್ಷ ಆರ್.ಮೂರ್ತಿ ಸೇರಿದಂತೆ ಮುಖಂಡರು ಬರಮಾಡಿಕೊಂಡರು.

ಇದಕ್ಕೂ ಮುನ್ನ ‌ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಡಿ.ಕೆ.ಶಿವಕುಮಾರ್, 'ಬಿಜೆಪಿಯವರು‌ ಅವರ‌ ನಾಯಕರ ನಡುವೆ ಜೋಡೊ ಮಾಡಿಕೊಳ್ಳಲಿ. ನಾನು- ಸಿದ್ದರಾಮಯ್ಯ ಒಂದಾಗಿದ್ದೇವೆ. ಈಶ್ವರಪ್ಪ‌ ಸಚಿವ ಸ್ಥಾನಕ್ಕಾಗಿ ಕಣ್ಣೀರು‌ ‌ಹಾಕುತ್ತಿದ್ದಾರೆ ಎಂದು ಟೀಕಿಸಿದರು

'ರಾಹುಲ್ ಗಾಂಧಿ ‌ನೇತೃತ್ವದಲ್ಲಿ‌ ಭಾರತ್ ಜೋಡೊ ಯಾತ್ರೆ ಯಶಸ್ವಿಯಾಗಿ ನಡೆಯುತ್ತಿದ್ದು, ಇದೇ 6ರಂದು‌ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಕೂಡ ಭಾಗಿಯಾಗಲಿದ್ದಾರೆ' ಎಂದು ತಿಳಿಸಿದರು.

ರಾಜ್ಯದಲ್ಲಿ ರಾಹುಲ್ ಗಾಂಧಿ ‌ನಡೆಸುತ್ತಿರುವ ಭಾರತ್ ಜೋಡೊ ಯಾತ್ರೆಯು ಸೋಮವಾರ ಬೆಳಿಗ್ಗೆ ಮಂಡ್ಯ ಜಿಲ್ಲೆ ಪ್ರವೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT