ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರಿನ ಅಭಿವೃದ್ಧಿಗಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ: ಯದುವೀರ ಒಡೆಯರ್

Published 14 ಮಾರ್ಚ್ 2024, 9:26 IST
Last Updated 14 ಮಾರ್ಚ್ 2024, 9:26 IST
ಅಕ್ಷರ ಗಾತ್ರ

ಬೆಂಗಳೂರು: ಅಭಿವೃದ್ಧಿ ಮತ್ತು ಸಾರ್ವಜನಿಕ ಸೇವೆಯ ದೃಷ್ಟಿಕೋನ ಇಟ್ಟುಕೊಂಡು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಲು ನಿರ್ಧರಿಸಿದ್ದಾಗಿ ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

ರಾಜ್ಯ ಬಿಜೆಪಿ ಕಾರ್ಯಾಲಯಕ್ಕೆ ಗುರುವಾರ ಭೇಟಿ ನೀಡಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು. ಅಧಿಕಾರ ಇದ್ದಾಗ ಹೆಚ್ಚಿನ ಅಭಿವೃದ್ಧಿ ಮಾಡಲು ಅವಕಾಶ ಸಿಗುತ್ತದೆ ಎಂದರು.

ಪ್ರತಾಪ ಸಿಂಹ ಅವರು ಮೈಸೂರಿನ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅವರು ತಮಗೆ ಸಹಕಾರ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಶಾಸಕ ಬಸವರಾಜ ಬೊಮ್ಮಾಯಿ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ, ಕೋಲಾರ ಸಂಸದ ಎಸ್. ಮುನಿಸ್ವಾಮಿ, ಶಾಸಕ ಶರಣು ಸಲಗರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಗೌಡ, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT