ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಅತಿಥಿ ಉಪನ್ಯಾಸಕರ ಸಂಘದ ನಿಯೋಗ ಹಾಗೂ ಕುಲಪತಿ ಎನ್.ಕೆ.ಲೋಕನಾಥ್ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ತಮ್ಮ ನಿವಾಸದಲ್ಲಿ ಸಭೆ ನಡೆಸಿದರು.

‘ದಶಕದಿಂದಲೂ ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿರುವ ಅತಿಥಿ ಉಪನ್ಯಾಸಕರನ್ನು ಸೇವೆಯಲ್ಲಿ ಮುಂದುವರಿಸಬೇಕು. ಸುಮಾರು 640 ಅತಿಥಿ ಶಿಕ್ಷಕರಿದ್ದು, ಈ ಶೈಕ್ಷಣಿಕ ಸಾಲಿನಲ್ಲೂ ಯಾವುದೇ ಸಂದರ್ಶನಗಳಿಲ್ಲದೆ ಅವರನ್ನು ಮುಂದುವರಿಸಿ. ಖಾಲಿ ಹುದ್ದೆಗಳಿಗೆ ಸಂದರ್ಶನ ನಡೆಸಿ’ ಎಂದು ಮುಖ್ಯಮಂತ್ರಿ ಸೂಚಿಸಿದರು.

ಅತಿಥಿ ಉಪನ್ಯಾಸಕರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಸ್ಥಳಕ್ಕೆ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು. ಅವರು ತೆರಳಿದ ಬಳಿಕವೂ ಧರಣಿ ಮುಂದುವರಿದಿತ್ತು.

ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ವೆಂಕಟೇಶ್, ಡಾ.ಯತೀಂದ್ರ ಸಿದ್ದರಾಮಯ್ಯ, ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳಾದ ಪಾಪಣ್ಣ, ಮಲ್ಲಿಕಾರ್ಜುನ, ರಮ್ಯಾ, ರಮೇಶ್, ಮರಿದೇವಯ್ಯ ಎಸ್. ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.