ಹುಣಸೂರು (ಮೈಸೂರು): ಅರಣ್ಯ ಇಲಾಖೆ ಸಿಬ್ಬಂದಿಗೆ ಕೋವಿಡ್ ಲಸಿಕೆ ನೀಡಿದ್ದಕ್ಕಾಗಿ ನಂಜನಗೂಡು ಹಾಗೂ ಎಚ್.ಡಿ.ಕೋಟೆ ತಾಲ್ಲೂಕು ವೈದ್ಯಾಧಿಕಾರಿಗಳಿಗೆ ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಟಿ.ಅಮರನಾಥ್ ನೋಟಿಸ್ ನೀಡಿದ್ದಾರೆ.

‘ಮೇ 28ರಂದು, ಎರಡೂ ತಾಲ್ಲೂಕಿನಲ್ಲಿ ನಡೆದ ಲಸಿಕಾ ಅಭಿಯಾನದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಮುಂಚೂಣಿ ಕಾರ್ಯಕರ್ತರೆಂದು ಪರಿಗಣಿಸಿಲಸಿಕೆ ನೀಡಿರುವುದು ಕಂಡುಬಂದಿದೆ. ಈಕ್ರಮಕ್ಕೆಆರೋಗ್ಯ ಇಲಾಖೆಯ ರಾಜ್ಯ ಮಟ್ಟದ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹೀಗಾಗಿ, ಕೂಡಲೇ ಸಮಜಾಯಿಷಿ ನೀಡಬೇಕು.ಮುಂದಿನ ದಿನಗಳಲ್ಲಿಸರ್ಕಾರ ಮಾರ್ಗಸೂಚಿಯಂತೆ ಲಸಿಕೆ ನೀಡಬೇಕು’ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಈ ಕ್ರಮಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘ನಮ್ಮ ಸಿಬ್ಬಂದಿ ಕಾಡಂಚಿನ ಪ್ರದೇಶಗಳಲ್ಲಿ, ಸುತ್ತಲಿನ ಗ್ರಾಮಗಳಲ್ಲಿ ಕಾರ್ಯಾಚರಣೆಯಲ್ಲಿತೊಡಗಿರುತ್ತಾರೆ. ಗ್ರಾಮಸ್ಥರ ಸಂಪರ್ಕಕ್ಕೆ ಬರುತ್ತಿರುತ್ತಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಲಸಿಕೆ ಹಾಕಬೇಕು. ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಬೇಕು. ಅರಣ್ಯ ಇಲಾಖೆ ಸಿಬ್ಬಂದಿಗೆಆತ್ಮಸ್ಥೈರ್ಯ ತುಂಬಬೇಕು’ ಎಂದು ಡಿಸಿಎಫ್ ಪ್ರಶಾಂತಕುಮಾರ್ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

ನಾಗರಹೊಳೆ ಹುಲಿ ಯೋಜನಾ ನಿರ್ದೇಶಕ ಮಹೇಶ್ ಕುಮಾರ್, ‘ಇಲಾಖೆಯಸಿಬ್ಬಂದಿಯನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿದ್ದು, ಸಿಬ್ಬಂದಿಗೆ ಲಸಿಕೆ ನೀಡಿರುವುದರಲ್ಲಿ ತಪ್ಪೇನಿದೆ’ ಎಂದು ಪ್ರಶ್ನಿಸಿದರು.

‘ಸಿಬ್ಬಂದಿಗೆ ಸೋಂಕು ತಗುಲಿದರೆ ಪ್ರಾಣಿಗಳಿಗೂ ತೊಂದರೆಯಾಗಬಹುದು.ಹೀಗಾಗಿ, ಅವರಿಗೂ ಲಸಿಕೆ ನೀಡಬೇಕು’ಎಂದು ಮನವಿ ಮಾಡಿದರು.

ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾ ಲಸಿಕಾ ನೋಡಲ್ ಅಧಿಕಾರಿಡಾ.ಎಲ್.ರವಿ, ‘ಸದ್ಯಕ್ಕೆ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡಲು ಮಾತ್ರ ಸೂಚನೆ ಇದೆ. ಅರಣ್ಯ ಇಲಾಖೆಯ ಸಿಬ್ಬಂದಿ ಆದ್ಯತಾ ಪಟ್ಟಿಯಲ್ಲಿ ಬರುತ್ತಾರೆ. ನಂತರದ ದಿನಗಳಲ್ಲಿ ಅವರಿಗೆ ಲಸಿಕೆ ನೀಡಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.