ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರಗೂರು | ಹುಲಿ ದಾಳಿ; ಹಸು ಸಾವು

Published 15 ಜನವರಿ 2024, 14:15 IST
Last Updated 15 ಜನವರಿ 2024, 14:15 IST
ಅಕ್ಷರ ಗಾತ್ರ

ಸರಗೂರು: ತಾಲ್ಲೂಕಿನ ಶಿವಪುರ ಗ್ರಾಮದ ನೀರುಗಂಟಿ ರಾಜಣ್ಣ ಅವರಿಗೆ ಸೇರಿದ ಹಸುವನ್ನು ಹುಲಿ ದಾಳಿ ನಡೆಸಿ ಕೊಂದಿದೆ. ಜಮೀನಿನಲ್ಲಿ ಮೇಯುತ್ತಿದ್ದ ಹಸುಗಳನ್ನು ಹುಲಿ ಕೊಂದು ತಿಂದರೂ ಹುಲಿ ಸೆರೆಗೆ ಕಾರ್ಯಾಚರಣೆ ನಡೆಸುತ್ತಿಲ್ಲ ಎಂದು ಅರಣ್ಯ ಇಲಾಖೆ ವಿರುದ್ಧ ಕಾಡಂಚಿನ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ‘ಎರಡು-ಮೂರು ದಿನಗಳಿಗೊಮ್ಮೆ ಹಸುಗಳು ಹುಲಿ ದಾಳಿಗೆ ಬಲಿಯಾಗುತ್ತಿದ್ದು, ಇದರಿಂದಾಗಿ ರೈತರು ಆತಂಕಗೊಂಡಿದ್ದಾರೆ. ಇದಲ್ಲದೆ ಕಾಡಂಚಿನ ಗ್ರಾಮಗಳಲ್ಲಿನ ಜಮೀನಿನಲ್ಲಿ ದನ ಮೇಯುಸುತ್ತಿದ್ದ ರೈತರ ಮೇಲೆ ಹುಲಿ ದಾಳಿ ನಡೆಸಿ, ಕೊಂದು ತಿಂದಿರುವ ಪ್ರಕರಣ ನಡೆದಿದೆ. ಹುಲಿ ಸೆರೆಗೆ ಕಾರ್ಯಾಚರಣೆ ನಡೆಸಬೇಕು’ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT