ನಂಜನಗೂಡು: ನಗರದ ಚಾಮರಾಜನಗರ ಬೈಪಾಸ್ ರಸ್ತೆಯ ಶ್ರೀಕಂಠೇಶ್ವರ ದೇವಾಲಯದ ಸಮೀಪ ಭಾನುವಾರ ಟಾಟಾ ಏಸ್ ಟೆಂಪೊ ವಾಹನದಲ್ಲಿ ಹಸು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಂಜನಗೂಡಿನಿಂದ ಚಾಮರಾಜನಗರಕ್ಕೆ ಒಂದು ಹಸು ಹಾಗೂ ಐದು ಕರುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು, ಅನುಮಾನಗೊಂಡ ಸಾರ್ವಜನಿಕರು ಪೊಲೀಸರಿಗೆ ವಿಷಯ ತಿಳಿಸಿ, ಜಾನುವಾರುಗಳನ್ನು ರಕ್ಷಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.