ಬೆಟ್ಟದಪುರ: ಇಲ್ಲಿನ ಗ್ರಾಮದೇವತೆಯಾದ ಶಾಂತವೀರಮ್ಮ ದೇವಾಲಯದಲ್ಲಿ ಹುಂಡಿ ಒಡೆದು ಹಣ ದೋಚಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ.
‘ಮಂಗಳವಾರ ಮಧ್ಯರಾತ್ರಿ ವೇಳೆ ಇಬ್ಬರು ಕಳ್ಳರು ದೇವಸ್ಥಾನಕ್ಕೆ ಬಂದಿರುವುದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಳ್ಳರು ಯಾರೆಂದು ಪತ್ತೆಯಾಗಿಲ್ಲ’ ಎಂದು ಪೊಲೀಸ್ ಮೂಲಗಳಿ ತಿಳಿಸಿವೆ.
ಬೆಟ್ಟದಪುರ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಎಂ.ಪ್ರಕಾಶ್ ಎತ್ತಿನಮನಿ ನೇತೃತ್ವದ ತಂಡ ಸ್ಥಳ ಪರಿಶೀಲನೆ ನಡೆಸಿದೆ.
‘ದೇವಾಲಯದ ಹುಂಡಿಯಲ್ಲಿ ಸುಮಾರು ₹30 ಸಾವಿರ ಹಣ ಇರಬಹುದು ಎಂದು ಅಂದಾಜಿಸಲಾಗಿದೆ’ ಎಂದು ಆಡಳಿತ ಮಂಡಳಿ ಸದಸ್ಯರು ತಿಳಿಸಿದ್ದಾರೆ.
ವರ್ಷದ ಹಿಂದೆ ಬೆಟ್ಟದಪುರ ಗ್ರಾಮದ ದಾನಿಗಳು ಭಕ್ತರು ಸೇರಿ ಸುಮಾರು ₹ 90 ಲಕ್ಷ ರೂ.ವೆಚ್ಚದಲ್ಲಿ ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಲಾಗಿತ್ತು.
ದೇವಸ್ಥಾನದಲ್ಲಿ ನಡೆದಿರುವ ಈ ಕಳ್ಳತನ ಪ್ರಕರಣದಿಂದ ನಿವಾಸಿಗಳಲ್ಲಿ ಆತಂಕ ಮೂಡಿದೆ. ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.