ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ

Published 8 ಜೂನ್ 2024, 7:57 IST
Last Updated 8 ಜೂನ್ 2024, 7:57 IST
ಅಕ್ಷರ ಗಾತ್ರ

ಮೈಸೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 4 ಪರೀಕ್ಷಾ ಕೇಂದ್ರಗಳಲ್ಲಿ ಜೂನ್‌ 7ರಿಂದ 9ರವರೆಗೆ ಹಾಗೂ ಜೂನ್ 11ರಿಂದ 23ರವರೆಗೆ 2024ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳು ನಡೆಯಲಿವೆ.

ಕೇಂದ್ರಗಳ ಸುತ್ತಲೂ ಪರೀಕ್ಷೆಯ ದಿನದಂದು ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಕಲಂ 144ರಡಿಯಲ್ಲಿ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಜರ್‌ಬಾದ್‌ನ ಪೀಪಲ್ಸ್ ಪಾರ್ಕ್‌ನ ಬಾಲಕಿಯರ ಸರ್ಕಾರಿ ಪಿಯು ಕಾಲೇಜು (ಪ್ರೌಢಶಾಲಾ ವಿಭಾಗ), ಸರ್ಕಾರಿ ವಿಭಜಿತ ಮಹಾರಾಜ ಪಿಯು ಕಾಲೇಜು (ಪ್ರೌಢಶಾಲಾ ವಿಭಾಗ), ಕೈಲಾಸಪುರಂನ ಪುಲಿಕೇಶಿ ರಸ್ತೆಯ ಸರ್ಕಾರಿ ಪ್ರೌಢಶಾಲೆ ಹಾಗೂ ಜೆಎಲ್‌ಬಿ ರಸ್ತೆಯ ಮಹಾರಾಜ ಸರ್ಕಾರಿ ಪಿಯು ಕಾಲೇಜು (ಪ್ರೌಢಶಾಲಾ ವಿಭಾಗ) ಸುತ್ತಲೂ ನಿಷೇಧಾಜ್ಞೆ ಇರುತ್ತದೆ ಎಂದು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಿವುಡ ಮಕ್ಕಳ ಶಾಲೆ ಪ್ರವೇಶಕ್ಕೆ ಅರ್ಜಿ

ಮೈಸೂರು: ಇಲ್ಲಿನ ತಿಲಕ್‌ ನಗರದ ಕಿವುಡ ಮಕ್ಕಳ ಸರ್ಕಾರಿ ಪಾಠಶಾಲೆಯಲ್ಲಿ 2024-25ನೇ ಶೈಕ್ಷಣಿಕ ಸಾಲಿಗೆ 1ನೇ ತರಗತಿಗೆ (6 ವರ್ಷದಿಂದ 9 ವರ್ಷದೊಳಗಿನ ಕಿವುಡ ಬಾಲಕ ಅಥವಾ ಬಾಲಕಿಯರು) ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ದೂ.ಸಂ: 0821-2494104/ ಮೊ.ಸಂಖ್ಯೆ: 94490 10499 ಸಂಪರ್ಕಿಸಬಹುದು.

ಸಿಐಐಎಲ್‌ನಲ್ಲಿ ಸಮ್ಮೇಳನ 10ರಿಂದ

ಮೈಸೂರು: ಇಲ್ಲಿನ ಹುಣಸೂರು ರಸ್ತೆಯಲ್ಲಿರುವ ಭಾರತೀಯ ಭಾಷಾ ಸಂಸ್ಥಾನ (ಸಿಐಐಎಲ್‌)ದಿಂದ ಜೂನ್ 10ರಿಂದ 12ವರೆಗೆ ‘ಭಾರತದ ಶಾಸ್ತ್ರೀಯ ಭಾಷೆಗಳ ರಾಷ್ಟ್ರೀಯ ಸಮ್ಮೇಳನ’ ಹಮ್ಮಿಕೊಳ್ಳಲಾಗಿದೆ.

ಜೂನ್‌ 10ರಂದು ಬೆಳಿಗ್ಗೆ 10ಕ್ಕೆ ಉದ್ಘಾಟನೆ ನಡೆಯಲಿದೆ. ಗುರ್ಗಾಂವ್‌ನ ಅಮಿಟಿ ವಿಶ್ವವಿದ್ಯಾಲಯದ ಭಾಷಾಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಉದಯ ನಾರಾಯಣ ಸಿಂಗ್ ಭಾಷಣ ಮಾಡುವರು. ಸಿಐಐಎಲ್‌ ನಿರ್ದೇಶಕ ಪ್ರೊ.ಶೈಲೇಂದ್ರ ಮೋಹನ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT