ಶುಕ್ರವಾರ, ಫೆಬ್ರವರಿ 3, 2023
25 °C

ಮೈಸೂರು ದಸರಾ ವಸ್ತುಪ್ರದರ್ಶನ: ನಿತ್ಯ 10ಸಾವಿರ ಮಂದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರ ವತಿಯಿಂದ ದೊಡ್ಡಕೆರೆ ಮೈದಾನದ ಆವರಣದಲ್ಲಿ ಹಮ್ಮಿಕೊಂಡಿರುವ ದಸರಾ ವಸ್ತುಪ್ರದರ್ಶನಕ್ಕೆ ಸಾರ್ವಜನಿಕರು, ಪ್ರವಾಸಿಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಸೆ.26ರಿಂದ ಆರಂಭಗೊಂಡಿರುವ ಪ್ರದರ್ಶನವು, ಡಿ.24ರವರೆಗೆ ನಡೆಯಲಿದೆ. ನಿತ್ಯ ಸುಮಾರು 10ಸಾವಿರ ಹಾಗೂ ವಾರಾಂತ್ಯದ ದಿನಗಳಲ್ಲಿ ಮತ್ತು ಸಾರ್ವತ್ರಿಕ ರಜಾ ದಿನಗಳಲ್ಲಿ 15ಸಾವಿರದಿಂದ 20ಸಾವಿರ ಮಂದಿ ವಸ್ತುಪ್ರದರ್ಶನ ವೀಕ್ಷಿಸಲು ಭೇಟಿ ನೀಡುತ್ತಿದ್ದಾರೆ ಎಂದು ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸ್‌ಗೌಡ ತಿಳಿಸಿದ್ದಾರೆ.

‘ಪ್ರಾಧಿಕಾರದಲ್ಲಿರುವ ಪಿ.ಕಾಳಿಂಗರಾವ್ ರಂಗಮಂಟಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸಿದ್ಧ ಕಲಾವಿದರು, ಗಾಯಕರಿಂದ ಪ್ರತಿ ದಿನ ಸಂಜೆ 7ರಿಂದ ರಾತ್ರಿ 9.30ರವರೆಗೆ ಆಯೋಜಿಸಲಾಗುತ್ತಿದೆ. ವಸ್ತುಪ್ರದರ್ಶನ ಆವರಣದಲ್ಲಿ ಎಲ್ಲ ರೀತಿಯ ಜಾಹೀರಾತು ನೀಡಲು ಅವಕಾಶವಿದೆ. ಉದ್ದಿಮೆದಾರರು, ವ್ಯಾಪಾರಸ್ಥರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ: 0821–2446887, ಮೊ.ಸಂಖ್ಯೆ: 7204202444 ಸಂಪರ್ಕಿಸಬಹುದು’ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು