ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯಪಾಲರಿಂದ ಸಂವಿಧಾನ ವಿರೋಧಿ ನಡೆ: ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

Published : 29 ಆಗಸ್ಟ್ 2024, 14:36 IST
Last Updated : 29 ಆಗಸ್ಟ್ 2024, 14:36 IST
ಫಾಲೋ ಮಾಡಿ
Comments

ಮೈಸೂರು: ‘ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ವಿರೋಧ ಪಕ್ಷಗಳ ಹುನ್ನಾರಕ್ಕೆ ರಾಜ್ಯಪಾಲರು ಪರೋಕ್ಷವಾಗಿ ಸಹಕರಿಸುವ ಮೂಲಕ ಸಂವಿಧಾನ ವಿರೋಧಿ ನಡೆ ಅನುಸರಿಸಿದ್ದಾರೆ’ ಎಂದು ಆರೋಪಿಸಿ ರಾಜ್ಯ ದಲಿತ ಸಂಘರ್ಷ ಸಮಿತಿ ಸದಸ್ಯರು ಪುರಭವನದ ಆವರಣದ ಅಂಬೇಡ್ಕರ್‌ ಪ್ರತಿಮೆ ಮುಂಭಾಗ ಗುರುವಾರ ಪ್ರತಿಭಟಿಸಿದರು.

‘ರಾಜ್ಯಪಾಲರು ಸಂವಿಧಾನಿಕ ಪ್ರತಿನಿಧಿಯಾಗಿ ಕೆಲಸ ಮಾಡುವ ಬದಲಾಗಿ ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಜನರ ಪೂರ್ಣ ಬೆಂಬಲ ಪಡೆದು ಅಧಿಕಾರ ಪಡೆದಿರುವ ಕಾಂಗ್ರೆಸ್‌ ಸರ್ಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ಸರ್ಕಾರ ವಿವಿಧ ಪ್ರಯತ್ನ ನಡೆಸಿದ್ದು, ಇದೀಗ ರಾಜಭವನವನ್ನು ಬಳಸಿಕೊಂಡಿರುವುದು ವಿಷಾದನೀಯ’ ಎಂದು ಟೀಕಿಸಿದರು.

‘ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶಿಸುವ ಮೂಲಕ ರಾಜ್ಯಪಾಲರು ಜನರೇ ಒಮ್ಮತದಿಂದ ಆರಿಸಿದ ಆಡಳಿತ ಪಕ್ಷವನ್ನು ಕಿತ್ತೊಗೆಯಲು ಯತ್ನಿಸುತ್ತಿದ್ದಾರೆ. ಅವರು ಸಂವಿಧಾನ ರಕ್ಷಣೆಯ ಕೆಲಸ ಮಾಡುವುದು ಬಿಟ್ಟು ಈ ರೀತಿಯ ಕಾರ್ಯಕ್ಕೆ ಇಳಿದು ರಾಜಭವನದ ಗೌರವಕ್ಕೆ ಚ್ಯುತಿ ತಂದಿದ್ದಾರೆ’ ಎಂದು ಹೇಳಿದರು.

‘ರಾಷ್ಟ್ರಪತಿಯು ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಯ ಬಗ್ಗೆ ಮಾಹಿತಿ ಪಡೆದು, ರಾಜ್ಯಪಾಲರನ್ನು ವಾಪಸ್‌ ಕರೆಸಿಕೊಳ್ಳಬೇಕು. ಬಹುಮತ ಪಡೆದಿರುವ ಕಾಂಗ್ರೆಸ್‌ ಸರ್ಕಾರವು ಸುಗಮವಾಗಿ ಆಡಳಿತ ನಡೆಸಲು ಅವಕಾಶ ಮಾಡಿಕೊಡಬೇಕು’ ಎಂದು ಆಗ್ರಹಿಸಿದರು.

ಸಂಘದ ಪದಾಧಿಕಾರಿಗಳಾದ ರಾಜಯ್ಯ ಇಟ್ನ, ಮಲ್ಲೇಶ್‌ ಚುಂಚನಹಳ್ಳಿ, ಕೃಷ್ಣಕೊಳಗಟ್ಟಿ, ಸುರೇಶ್‌ ಯರಗನಹಳ್ಳಿ, ರಾಜು ನೀಲವಾಡಿ, ಪುಟ್ಟಸ್ವಾಮಿ ದೇವರಸನಹಳ್ಳಿ, ಸುರೇಶ್ ಶಂಕರಪುರ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT