ಮೈಸೂರು: ದಸರಾ ಅಂಗವಾಗಿ ಸೆ.22ರಿಂದ ಅ.1ರವರೆಗೆ ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ‘ಕನ್ನಡ ಪುಸ್ತಕ ಮಾರಾಟ ಮೇಳ’ ಆಯೋಜಿಸಲಾಗಿದೆ.

‘ಮೇಳದಲ್ಲಿ ನಿತ್ಯವೂ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ, ವಿಚಾರಸಂಕಿರಣ ಮೊದಲಾದ ಸಾಹಿತ್ಯ ಚಟುವಟಿಕೆಗಳನ್ನು ಆಯೋಜಿಸಲಾಗುವುದು. ಲೇಖಕರು ಹಾಗೂ ಪ್ರಕಾಶಕರು ಹೊಸ ಪುಸ್ತಕಗಳನ್ನು ಬಿಡುಗಡೆ ಮಾಡಲು ಬಯಸಿದ್ದಲ್ಲಿ ಅವಕಾಶ ಕಲ್ಪಿಸಲಾಗುವುದು. ಇದಕ್ಕಾಗಿ ನೋಂದಣಿ ಮಾಡಿಕೊಳ್ಳಬೇಕು’ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಮಾನಸ ತಿಳಿಸಿದ್ದಾರೆ.

‘ಬಿಡುಗಡೆ ಮಾಡಲು ಬಯಸುವ ಪುಸ್ತಕದ 2 ಪ್ರತಿಯೊಂದಿಗೆ ನಿಗದಿತ ನಮೂನೆ ಭರ್ತಿ ಮಾಡಿ ಸಲ್ಲಿಸಬೇಕು. ಈ ಪುಸ್ತಕಗಳು ಯಾವುದೇ ವಿವಾದಾತ್ಮಕ ಅಂಶಗಳನ್ನು ಹೊಂದಿರಬಾರದು. ಒಂದು ವೇಳೆ ಪುಸ್ತಕ ಸಂಬಂಧ ಯಾವುದೇ ಕಾನೂನು ತೊಡಕುಗಳು ಉಂಟಾದಲ್ಲಿ ಅದಕ್ಕೆ ಲೇಖಕರು ಹಾಗೂ ಪ್ರಕಾಶಕರೇ ಜವಾಬ್ದಾರರಾಗುತ್ತಾರೆ. ಆಯ್ಕೆ ಮಾಡುವ ಅಥವಾ ತಿರಸ್ಕರಿಸುವ ಸಂಪೂರ್ಣ ಅಧಿಕಾರವನ್ನು ಪ್ರಾಧಿಕಾರ ಹೊಂದಿರುತ್ತದೆ. ಸೆ. 16ರ ನಂತರ ಬರುವ ಯಾವುದೇ ಪುಸ್ತಕಗಳನ್ನು ಬಿಡುಗಡೆಗೆ ಸ್ವೀಕರಿಸುವುದಿಲ್ಲ. ಕಾರ್ಯಕ್ರಮಕ್ಕೆ ಬರುವ ಲೇಖಕರು ಅಥವಾ ಪ್ರಕಾಶಕರಿಗೆ ಸಂಭಾವನೆ, ಪ್ರಯಾಣ ವೆಚ್ಚ ಸೇರಿದಂತೆ ಇತರೆ ಯಾವುದೇ ಸೌಲಭ್ಯ ಕೊಡುವುದಿಲ್ಲ’ ಎಂದು ಮಾಹಿತಿ ನೀಡಿದ್ದಾರೆ.

‘ಬಿಡುಗಡೆಗೆ ಸ್ವಿಕೃತವಾಗುವ ಪುಸ್ತಕಗಳನ್ನು ಸಂಖ್ಯೆಗೆ ಅನುಗುಣವಾಗಿ ಮೇಳ ನಡೆಯುವ 9 ದಿನಗಳಲ್ಲಿ ಸಮಯ ಕೊಡಲಾಗುವುದು. ಹೆಚ್ಚಿನ ಮಾಹಿತಿಗೆ ಮೊ.ಸಂ. 94480 56562 ಸಂಪರ್ಕಿಸಬಹುದು’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.