ಮೈಸೂರು: ‘ಮನೆಗಳಲ್ಲಿ ಗೊಂಬೆ ಕೂರಿಸುವ ಮೂಲಕ ಗೃಹಿಣಿಯರು ನಮ್ಮ ಪರಂಪರೆಯನ್ನು ಉಳಿಸಿ– ಬೆಳೆಸುತ್ತಿದ್ದಾರೆ’ ಎಂದು ಮುಖಂಡ ಕೆ.ರಘುರಾಮ್ ವಾಜಪೇಯಿ ಹೇಳಿದರು.

ಶ್ರೀದುರ್ಗಾ ಫೌಂಡೇಶನ್ ಟ್ರಸ್ಟ್ ವತಿಯಿಂದ ಇಲ್ಲಿನ ರಾಮಾನುಜ ರಸ್ತೆಯ ನಮೋ ಯೋಗ ಭವನದಲ್ಲಿ ‘ದಸರಾ ಮನೆ ಮನೆ ಗೊಂಬೆ ಕೂರಿಸುವ ಸ್ಪರ್ಧೆ’ಯ ವಿಜೇತರಿಗೆ ಸೋಮವಾರ ಬಹುಮಾನ ವಿತರಿಸಿ ಅವರು ಮಾತನಾಡಿದರು.

‘ನಮ್ಮ ಸಂಸ್ಕೃತಿ ಮತ್ತು ಪರಂಪರೆಯ ಉಳಿವಿಗಾಗಿ ಹೋರಾಡುವ ಸಂದರ್ಭ ಎದುರಾಗಿದೆ. ಇದರಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು. ನಮ್ಮ ಸಂಪ್ರದಾಯ ಮತ್ತು ಧಾರ್ಮಿಕತೆಯ ರಕ್ಷಣೆಗಾಗಿ ಹಿಂದೂಗಳೆಲ್ಲರೂ ಒಗ್ಗಟ್ಟಾಗಿ, ಮುಂದಿನ ಪೀಳಿಗೆಗೆ ಉಳಿಸಬೇಕು’ ಎಂದರು.

ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್, ಕಾಂಗ್ರೆಸ್ ಮುಖಂಡ ಎನ್.ಎಂ.ನವೀನ್ ಕುಮಾರ್ ಮಾತನಾಡಿದರು.

ಶ್ರೀದುರ್ಗಾ ಫೌಂಡೇಶನ್ ಅಧ್ಯಕ್ಷೆ ರೇಖಾ ಶ್ರೀನಿವಾಸ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಎನ್ಐಇ ಇ ಕಾಲೇಜಿನ ಪ್ರೊ.ಸಿ.ಕೆ.ವನಮಾಲಾ, ಅಂಬಾಭವಾನಿ ಸಮಾಜ ಮಹಿಳಾ ಅಧ್ಯಕ್ಷೆ ಸವಿತಾ ಘಾಟ್ಕೆ, ಪದವೀಧರರ ಸಹಕಾರ ಬ್ಯಾಂಕ್ ನಿರ್ದೇಶಕಿ ವರಲಕ್ಷ್ಮಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.