ಮೈಸೂರು: 2023ನೇ ಸಾಲಿನ ದಸರಾ ಮಹೋತ್ಸವದ ಅಂಗವಾಗಿ ಅ.24ರಂದು ನಡೆಯುವ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಜಾನಪದ ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ತಂಡದ ಭಾವಚಿತ್ರ, ಸದಸ್ಯರ ವಿವರ, ಅಂಚೆ ವಿಳಾಸ ಹಾಗೂ ಮುಖ್ಯಸ್ಥರ ಸಂಪರ್ಕ ಸಂಖ್ಯೆಯ ಮಾಹಿತಿಯುಳ್ಳ ಅರ್ಜಿಯನ್ನು ದಸರಾ ಮೆರವಣಿಗೆ ಉಪಸಮಿತಿಯ ಉಪವಿಶೇಷಾಧಿಕಾರಿಗಳು ಅಥವಾ ಸಹಾಯಕ ನಿರ್ದೇಶಕರು, ಮೈಸೂರು ನಗರ ಪೊಲೀಸ್ ಆಯುಕ್ತರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸೆ.30ರ ಒಳಗಾಗಿ ಅರ್ಜಿ ಸಲ್ಲಿಸಬೇಕು.
ಉತ್ತಮ ಪೋಷಾಕು, ಸಾಂಪ್ರದಾಯಿಕ, ವಿಶಿಷ್ಟ ಶೈಲಿಯ ಹಾಗೂ ವಿಭಿನ್ನ ಕಲಾಪ್ರಕಾರ ಹೊಂದಿರುವ ತಂಡವನ್ನು ಆಯ್ಕೆ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.