ಅ.1ರಂದು ಸಿಂಹಾಸನ ಜೋಡಣೆ ಕಾರಣ ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ಗಂಟೆವರೆಗೆ, 7ರಂದು ಖಾಸಗಿ ದರ್ಬಾರ್ ನಡೆಯಲಿದ್ದು, ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆವರೆಗೆ ಪ್ರವೇಶವಿರುವುದಿಲ್ಲ. 14ರಂದು ಆಯುಧ ಪೂಜೆ ಪ್ರಯುಕ್ತ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆವರೆಗೆ, 15ರಂದು ವಿಜಯದಶಮಿ ಕಾರಣ ಸಂಪೂರ್ಣ ದಿನ ಪ್ರವೇಶವಿರುವುದಿಲ್ಲ. ಅ.31ರಂದು ಸಿಂಹಾಸನವನ್ನು ಸ್ವಸ್ಥಾನದಲ್ಲಿ ಇಡುತ್ತಿದ್ದು, ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಬ್ರಮಣ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.