ಶನಿವಾರ, 7 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದಸರಾ: ಉಪ ಸಮಿತಿ ರಚನೆ, ಅಧಿಕಾರಿಗಳಿಗೆ ಜವಾಬ್ದಾರಿ

Published 17 ಆಗಸ್ಟ್ 2024, 15:54 IST
Last Updated 17 ಆಗಸ್ಟ್ 2024, 15:54 IST
ಅಕ್ಷರ ಗಾತ್ರ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಕಾರ್ಯಕ್ರಮಗಳನ್ನು ವೈಭವಯುತವಾಗಿ ಆಯೋಜಿಸಲು 19 ಉಪ ಸಮಿತಿಗಳನ್ನು ಜಿಲ್ಲಾಡಳಿತ ರಚಿಸಿದೆ.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಉಪ ಸಮಿತಿಗಳನ್ನು ರಚಿಸಲಾಗಿದೆ. ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಉಪ ವಿಶೇಷಾಧಿಕಾರಿಗಳು, ಕಾರ್ಯಾಧ್ಯಕ್ಷರು ಹಾಗೂ ಕಾರ್ಯದರ್ಶಿಗಳನ್ನು ನೇಮಿಸಲಾಗಿದೆ.

ಕಾರ್ಯಕ್ರಮದ ವಿವರ, ಅಂದಾಜು ವೆಚ್ಚದ ಮಾಹಿತಿಯನ್ನು ತ್ವರಿತವಾಗಿ ಸಲ್ಲಿಸಬೇಕು. ಅನುದಾನವನ್ನು ಪಾರದರ್ಶಕವಾಗಿ ವೆಚ್ಚ ಮಾಡಬೇಕು ಹಾಗೂ ಲೋಪಗಳಾಗದಂತೆ ನೋಡಿಕೊಳ್ಳಬೇಕು ಎಂದು ದಸರಾ ವಿಶೇಷಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ ಸೂಚಿಸಿದ್ದಾರೆ.

ಉಪ ಸಮಿತಿವಾರು ನೇಮಕ ಮಾಡುವ ಅಧಿಕಾರೇತರ ಪದಾಧಿಕಾರಿಗಳೊಂದಿಗೆ ಸಮನ್ವಯ ಮಾಡಿಕೊಂಡು ಕಾರ್ಯಕ್ರಮ ಆಯೋಜಿಸಲು ಕ್ರಮ ವಹಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ. ಅಧಿಕಾರೇತರ ಪದಾಧಿಕಾರಿಗಳನ್ನು ಇನ್ನೂ ನೇಮಿಸಿಲ್ಲ.

ವಿವರ ಇಂತಿದೆ. ಕ್ರಮವಾಗಿ ಉಪ ವಿಶೇಷಾಧಿಕಾರಿ, ಕಾರ್ಯಾಧ್ಯಕ್ಷರು ಹಾಗೂ ಕಾರ್ಯದರ್ಶಿಗಳು.

ಸ್ವಾಗತ ಆಮಂತ್ರಣ ಮತ್ತು ಸ್ಥಳಾವಕಾಶ: ಎಡಿಸಿ ಪಿ.ಶಿವರಾಜು, ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರೂಪಾ, ನಗರಾಭಿವೃದ್ಧಿ ಪ್ರಾಧಿಕಾರದ ಎಇಇ ಕುಬೇರಪ್ಪ, ಮಹಾನಗರ ಪಾಲಿಕೆಯ ಎಸ್‌ಇ ಸಿಂಧು (ಸಹ ಕಾರ್ಯಾಧ್ಯಕ್ಷರು). ಸ್ಥಳಾವಕಾಶ: ಮೈಸೂರು ಉಪ ವಿಭಾಗಾಧಿಕಾರಿ ರಕ್ಷಿತ್ ಕೆ.ಆರ್., ಮೈಸೂರು ತಾಲ್ಲೂಕು ತಹಶೀಲ್ದಾರ್‌ ಮಹೇಶ್‌ ಕುಮಾರ್‌.

ಮೆರವಣಿಗೆ: ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಡಿಸಿಪಿ ಮುತ್ತುರಾಜ್‌, ಎಸಿಪಿ ಶಾಂತಮಲ್ಲಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಂ.ಡಿ. ಸುದರ್ಶನ್‌ (ಸಮನ್ವಯಾಧಿಕಾರಿ).

ಪಂಜಿನ ಕವಾಯತು: ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಡಿಸಿಪಿ ಜಾಹ್ನವಿ, ಎಸಿಪಿ ಸಿ.ಕೆ. ಅಶ್ವತ್ಥ ನಾರಾಯಣ, ಸಿಎಆರ್‌ ಡಿಸಿ‍‍‍ಪಿ ಮಾರುತಿ, ಮುಡಾ ಎಇಇ ರೂಪಶ್ರೀ.

ಸ್ತಬ್ಧಚಿತ್ರ: ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ (ಪ್ರಭಾರ) ಪ್ರಭುಸ್ವಾಮಿ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಇಇ ರಂಜಿತ್‌ಕುಮಾರ್, ಖಾದಿ ಮತ್ತು ಗ್ರಾಮೋದ್ಯೋಗ ಇಲಾಖೆಯ ಉಪ ನಿರ್ದೇಶಕಿ ಮೇಘಲಾ.

ರೈತ ದಸರಾ (ಗ್ರಾಮೀಣ ದಸರಾ): ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೃಷ್ಣಂರಾಜು, ಜಂಟಿ ಕೃಷಿ ನಿರ್ದೇಶಕ ಬಿ.ಎಸ್. ಚಂದ್ರಶೇಖರ್‌, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಶಿವಲಿಂಗಯ್ಯ (ಸಹ ಕಾರ್ಯಾಧ್ಯಕ್ಷ), ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಮಂಜುನಾಥ್‌.

ಕ್ರೀಡಾ ದಸರಾ: ಮುಡಾ ಕಾರ್ಯದರ್ಶಿ ಪ್ರಸನ್ನ ಕುಮಾರ್ ವಿ.ಕೆ., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಜಿತೇಂದ್ರ ಶೆಟ್ಟಿ, ಸಹಾಯಕ ನಿರ್ದೇಶಕ ಭಾಸ್ಕರ್ ನಾಯಕ್.

ಸಾಂಸ್ಕೃತಿಕ ದಸರಾ: ಅರಮನೆ ವೇದಿಕೆಗೆ ಜಿ.ಪಂ ಸಿಇಒ ಕೆ.ಎಂ.ಗಾಯಿತ್ರಿ, ಅರಮನೆ ಮಂಡಳಿ ಉಪ ನಿರ್ದೇಶಕ ಟಿ.ಎಸ್. ಸುಬ್ರಹ್ಮಣ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಡಿ.ಸುದರ್ಶನ್. ಇತರ ವೇದಿಕೆಗೆ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಸಿಇಒ ರುದ್ರೇಶ್ (ಕಾರ್ಯಾಧ್ಯಕ್ಷ).

ಲಲಿತ ಕಲೆ: ಪ್ರಾಚ್ಯವಸ್ತು ಸಂಗ್ರಹಾಲಯದ ಆಯುಕ್ತ ದೇವರಾಜು ಎ., ಕಾವಾದ ರೀಡರ್ ಬಿಂದುರಾಯ ಆರ್.ಬಿರಾದಾರ್, ಪ್ರೋಗ್ರಾಮಿಂಗ್ ಅಸಿಸ್ಟೆಂಟ್ ಎಚ್‌.ಬಿ. ಜಯಶಂಕರ್‌.

ದೀಪಾಲಂಕಾರ: ಸೆಸ್ಕ್‌ ಎಂಡಿ ಜಿ.ಶೀಲಾ, ಎಸ್‌ಇ ಸುನೀಲ್‌, ಇಇ ಪೂರ್ಣಚಂದ್ರ ತೇಜಸ್ವಿ ಆರ್.

ಕವಿಗೋಷ್ಠಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಮಲ್ಲಿಕಾರ್ಜುನ ಸ್ವಾಮಿ, ಮೈಸೂರು ವಿವಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕಿ ಎನ್.ಕೆ. ಲೋಲಾಕ್ಷಿ, ತಾ.ಪಂ. ಇಒ.

ಯೋಗ ದಸರಾ: ಭೂ ದಾಖಲೆಗಳ ಇಲಾಖೆಯ ಉಪನಿರ್ದೇಶಕಿ ರಮ್ಯಾ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಪುಷ್ಪಾ, ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಅನಂತರಾಜು ಎಂ.ಆರ್.

ಯುವ ಸಂಭ್ರಮ: ಎಸ್ಪಿ ಎನ್. ವಿಷ್ಣುವರ್ಧನ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಶಿವಕುಮಾರ್ ಪಿ., ಮೈಸೂರು ವಿವಿ ಇಇ ಹರೀಶ್ (ಸಹ ಕಾರ್ಯಾಧ್ಯಕ್ಷ), ಮುಡಾ ವಿಶೇಷ ತಹಶೀಲ್ದಾರ್ ಮೋಹನಕುಮಾರಿ, ಪಾಲಿಕೆ ವಲಯ ಆಯುಕ್ತ ಸತ್ಯಮೂರ್ತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರಾಘವೇಂದ್ರ.

ಯುವ ದಸರಾ: ಎಸ್ಪಿ ಎನ್. ವಿಷ್ಣುವರ್ಧನ, ಉಪ ವಿಭಾಗಾಧಿಕಾರಿ ರಕ್ಷಿತ್ ಕೆ.ಆರ್., ಮುಡಾ ವಿಶೇಷ ಭೂಸ್ವಾಧೀನಾಧಿಕಾರಿ ಮಂಜುನಾಥ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಶುಭಾ, ಕೇಂದ್ರ ವಾರ್ತಾ ಇಲಾಖೆ ಕ್ಷೇತ್ರ ಪ್ರಚಾರ ಅಧಿಕಾರಿ ಎಸ್.ಟಿ. ಶ್ರುತಿ (ಸಮನ್ವಯಾಧಿಕಾರಿ)

ಮಹಿಳಾ ಮತ್ತು ಮಕ್ಕಳ ದಸರಾ: ಎಸಿಐ ಜಂಟಿ ನಿರ್ದೇಶಕಿ ಪ್ರಿಯದರ್ಶಿನಿ ಕೆ., ಬುಡಕಟ್ಟು ಸಂಶೋಧನಾ ಸಂಸ್ಥೆಯ ಉಪನಿರ್ದೇಶಕಿ ಪ್ರಭಾ ಬಿ.ಎಸ್., ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಂಜುನಾಥ್ (ಸಹ ಕಾರ್ಯಾಧ್ಯಕ್ಷ), ಡಿಡಿಪಿಐ ಎಸ್.ಟಿ.ಜವರೇಗೌಡ.

ಆಹಾರ ಮೇಳ: ಮುಡಾ ಆಯುಕ್ತ ರಘುನಂದನ್ ಎ.ಎನ್., ಆಹಾರ ಭದ್ರತೆ ಮತ್ತು ಸುರಕ್ಷತೆ ಪ್ರಾಧಿಕಾರದ ಜಿಲ್ಲಾ ಅಂಕಿತ ಅಧಿಕಾರಿ ಕಾಂತರಾಜು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಹಾಯಕ ನಿರ್ದೇಶಕ ಪ್ರತೀಕ್ ಜಿ.ಹೆಗ್ಡೆ.

ಸ್ವಚ್ಛತೆ ಮತ್ತು ವ್ಯವಸ್ಥೆ: ಮಹಾನಗರ ಪಾಲಿಕೆಯ ಆಯುಕ್ತ ಆಶಾದ್ ಉರ್ ರೆಹಮಾನ್ ಶರೀಫ್, ಉಪ ಆಯುಕ್ತ ಸೋಮಶೇಖರ್‌ ಹಾಗೂ ಮುಖ್ಯ ಆರೋಗ್ಯಾಧಿಕಾರಿ ಡಾ.ವೆಂಕಟೇಶ್.

ಚಲನಚಿತ್ರ: ಮೈಸೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಬಸವರಾಜು, ಮುಡಾದ ಜಂಟಿ ನಿರ್ದೇಶಕ ಶಿವರಾಂ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಬಿ. ರಂಗೇಗೌಡ (ಸಹ ಕಾರ್ಯಾಧ್ಯಕ್ಷ), ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಕೆ.ಹರೀಶ್.

ಕುಸ್ತಿ: ಎಎಸ್ಪಿ ನಂದಿನಿ, ಕೆ.ಐ.ಎ.ಡಿ.ಬಿ. ವಿಶೇಷ ಭೂ ಸ್ವಾಧೀನಾಧಿಕಾರಿ ವೆಂಕಟರಾಜು, ನಂಜನಗೂಡು ಉಪ ವಿಭಾಗದ ಡಿವೈಎಸ್ಪಿ ರಘು.

ಗಜಪಯಣ: ಸಿಸಿಎಫ್‌ ಮಾಲತಿಪ್ರಿಯಾ, ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭುಗೌಡ ಐ.ಬಿ., ವನ್ಯಜೀವಿ ವಲಯದ ವಲಯ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್ ಹೂಗಾರ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT