ಮೈಸೂರು: ‘ನಗರದಲ್ಲಿ ಮಾನಂದವಾಡಿ ರಸ್ತೆಯ (ಎನ್ಐಇ ಕಾಲೇಜು ಎದುರಿನಲ್ಲಿ) ಒಂದು ಕಿ.ಮೀ. ವ್ಯಾಪ್ತಿಯಲ್ಲಿ ‘ವೈಟ್ಟ್ಯಾಪಿಂಗ್’ ಕಾಮಗಾರಿ ಪ್ರಾರಂಭವಾಗಿದ್ದು, ಇದರಿಂದ ಕುಡಿಯುವ ನೀರು ಪೂರೈಕೆ ಸೇರಿದಂತೆ ಇತರ ವ್ಯವಸ್ಥೆಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಹಾನಗರ ಪಾಲಿಕೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

‘ನಗರದ 8 ರಸ್ತೆಗಳಿಗೆ ವೈಟ್ಟ್ಯಾಪಿಂಗ್ ಕಾಮಗಾರಿ ಅನುಮೋದನೆಯಾಗಿದೆ. ಮಾನಂದವಾಡಿ ರಸ್ತೆಯಲ್ಲಿ ಆರಂಭಗೊಂಡಿದೆ. ಬೋಗಾದಿ ರಸ್ತೆ ಹಾಗೂ ವಿಶ್ವಮಾನವ ಜೋಡಿ ರಸ್ತೆಗಳಲ್ಲೂ ಮೊದಲ ಹಂತದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು’ ಎಂದರು.

‘ಮಹಾಗರ ಪಾಲಿಕೆ ಅಧಿಕಾರಿಗಳು ಕುಡಿಯುವ ನೀರು ಸಮರ್ಪಕ ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಸೆಸ್ಕ್ನವರು ವಿದ್ಯುತ್ ಕೇಬಲ್ಗೆ ತೊಂದರೆ ಆಗದಂತೆ ನೋಡಿಕೊಂಡು ವರದಿ ಸಲ್ಲಿಸಬೇಕು. ರಸ್ತೆ ನಿರ್ಮಿಸಿದ ನಂತರ ಅಗೆಯುವುದು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು’ ಎಂದು ಎಚ್ಚರಿಕೆ ನೀಡಿದರು.

‘ಬೋಗಾದಿ ರಸ್ತೆಯಲ್ಲಿ ವೈಟ್ಟ್ಯಾಪಿಂಗ್ ಕಾಮಗಾರಿ ಪ್ರಾರಂಭಕ್ಕೂ ಮುನ್ನ ಲೋಕೋಪಯೋಗಿ ಇಲಾಖೆ ಹಾಗೂ ಹಾನಗರ ಪಾಲಿಕೆ ಅಧಿಕಾರಿಗಳು ಜಂಟಿ ಪರಿಶೀಲನೆ ನಡೆಸಿ, ಎರಡು ದಿನದೊಳಗೆ ವರದಿ ಸಲ್ಲಿಸಬೇಕು. ಬಳಿಕ ಕಾಮಗಾರಿ ಪ್ರಾರಂಭಿಸಬೇಕು’ ಎಂದು ತಿಳಿಸಿದರು.

‘ಸೆಸ್ಕ್ ವತಿಯಿಂದ ನಗರದ 400 ಕಿ.ಮೀ. ವ್ಯಾಪ್ತಿಯಲ್ಲಿ ಯುಜಿ ಕೇಬಲ್ ಅಳವಡಿಕೆ ಕಾಮಗಾರಿ ಪ್ರಗತಿಯಲ್ಲಿದೆ. ಈ ಸಂದರ್ಭದಲ್ಲಿ ಒಳಚರಂಡಿ ಹಾಗೂ ಕುಡಿಯುವ ನೀರಿನ ಪೈಪ್ಲೈನ್ಗೆ ಹಾನಿಯಾದಲ್ಲಿ ಒಂದು ದಿನದೊಳಗಾಗಿ ಸರಿಪಡಿಸಿ ನಂತರ ಕಾಮಗಾರಿ ಮುಂದುವರಿಸಬೇಕು. ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಎಚ್ಚರ ವಹಿಸಬೇಕು’ ಎಂದರು.

‘ಈಗಾಗಲೇ ಕಾಮಗಾರಿ ವೇಳೆ, ಒಳಚರಂಡಿ ಹಾಗೂ ಕುಡಿಯುವ ನೀರಿನ ಪೈಪ್ಲೈನ್ ಹಾನಿ ಆಗಿರುವುದಾಗಿ ವರದಿಯಾಗಿದೆ. 15 ದಿನ ಕಾಮಗಾರಿ ಸ್ಥಗಿತಗೊಳಿಸಿ, ಹಾನಿಗೊಂಡ ಪೈಪ್ಲೈನ್ಗಳನ್ನು ಮೊದಲು ಸರಿಪಡಿಸಬೇಕು. ಈ ಬಗ್ಗೆ ಸೆಸ್ಕ್ ಹಾಗೂ ಹಾಗೂ ಪಾಲಿಕೆ ಅಧಿಕಾರಿಗಳು ವರದಿ ಸಲ್ಲಿಸಬೇಕು’ ಎಂದು ನಿರ್ದೇಶನ ನೀಡಿದರು.

ಮಹಾನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್, ಕಾರ್ಯಪಾಲಕ ಎಂಜಿನಿಯರ್ ಮಂಜು, ಸೆಸ್ಕ್ ಎಸ್ಇ ಸುನೀಲ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.