ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಜಿ ಶಾಸಕ ವಾಸು ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ

Published 9 ಮಾರ್ಚ್ 2024, 7:11 IST
Last Updated 9 ಮಾರ್ಚ್ 2024, 7:11 IST
ಅಕ್ಷರ ಗಾತ್ರ

ಮೈಸೂರು: ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ವಾಸು ಅವರ ನಿಧನಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

‘ವಾಸು ಅವರ ನಿಧನದ ಸುದ್ದಿ ಕೇಳಿ ಬಹಳ ನೋವಾಗಿದೆ. ನನ್ನ ಆತ್ಮೀಯರಾಗಿದ್ದ ಅವರೊಂದಿಗೆ ರಾಜಕೀಯ ಪಯಣದಲ್ಲಿ ಉತ್ತಮ ಒಡನಾಟ ಹೊಂದಿದ್ದೆ. ಮೈಸೂರು ಮೇಯರ್ ಆಗಿ, ನಂತರ ಶಾಸಕರಾಗಿದ್ದ ಅವರು ಮೈಸೂರು, ಚಾಮರಾಜನಗರ ಭಾಗದಲ್ಲಿ ಪಕ್ಷದ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರ ಅಗಲಿಕೆ ಪಕ್ಷಕ್ಕೆ ಬಹಳ ನಷ್ಟ ತಂದಿದೆ’ ಎಂದು ಹೇಳಿದ್ದಾರೆ.

‘ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಶಿವಕುಮಾರ್ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ವಾಸು ನಿಧನಕ್ಕೆ ಕೆಯುಡಬ್ಲ್ಯುಜೆ ಸಂತಾಪ

ಮಾಜಿ ಶಾಸಕರು ಹಾಗೂ ‘ಪ್ರಜಾನುಡಿ’ ಪತ್ರಿಕೆಯ ಮಾಲೀಕ ವಾಸು ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯುಜೆ)ಸಂತಾಪ ವ್ಯಕ್ತಪಡಿಸಿದೆ.

‘ಚಾಮರಾಜ ಕ್ಷೇತ್ರದ ಶಾಸಕರಾಗಿ, ಮೈಸೂರಿನಲ್ಲಿ ನೂತನ ಜಯದೇವ ಹೃದ್ರೋಗ ಆಸ್ಪತ್ರೆ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕೆ.ಆರ್.ಎಸ್. ರಸ್ತೆಯಲ್ಲಿ ಹೊಸದಾಗಿ ಜಿಲ್ಲಾಸ್ಪತ್ರೆ, ಟ್ರಾಮಾ ಕೇರ್ ಸೆಂಟರ್, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಕಿದ್ವಾಯಿ ಆಸ್ಪತ್ರೆ, ಮಹಾರಾಣಿ ವಾಣಿಜ್ಯ ಕಾಲೇಜಿಗೆ ನೂತನ ಕಟ್ಟಡ ಹೀಗೆ ಅನೇಕ ಅಭಿವೃದ್ಧಿ ಕಾರ್ಯಗಳು ಸಾಕಾರಗೊಳ್ಳಲು ಅಪಾರವಾಗಿ ಶ್ರಮಿಸಿದ್ದರು’ ಎಂದು ಅಧ್ಯಕ್ಷ ಶಿವಾನಂದ ತಗಡೂರು ಸ್ಮರಿಸಿದ್ದಾರೆ.

‘ವೀರಪ್ಪ ಮೊಯಿಲಿ ಅವರು ಮುಖ್ಯಮಂತ್ರಿ ಆಗಿದ್ದಾಗ ಅವರಿಗೆ ರಾಜಕೀಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ಮೈಸೂರಿನ ಮೇಯರ್ ಆಗಿ ಅತ್ಯುತ್ತಮವಾಗಿ ಕೆಲಸ ಮಾಡಿದ್ದರು. ಸಹಕಾರ ಕ್ಷೇತ್ರದಲ್ಲೂ ತೊಡಗಿಸಿಕೊಂಡು ತಮ್ಮದೇ ಆದ ಛಾಪು ಮೂಡಿಸಿದ್ದರು. 2002ರಿಂದ ‘ಪ್ರಜಾನುಡಿ’ ಪತ್ರಿಕೆಯನ್ನು ಮುನ್ನಡೆಸಿ ಅನೇಕ ಯುವ ಪತ್ರಕರ್ತರನ್ನು ಪ್ರೋತ್ಸಾಹಿಸುತ್ತಾ ಪತ್ರಿಕೋದ್ಯಮದಲ್ಲೂ ತಮ್ಮ ಹೆಜ್ಜೆ ಗುರುತುಗಳನ್ನು ಮೂಡಿಸಿರುವುದನ್ನು ಮರೆಯುವಂತಿಲ್ಲ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT