ಮೈಸೂರು: ‘ರಾಜ್ಯದಲ್ಲಿ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಮುಂದಾಗಿರುವ ರಾಜ್ಯ ಸರ್ಕಾರದ ನಿಲುವು ಸ್ವಾಗತಾರ್ಹ’ ಎಂದು ವಿಧಾನಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್ ಹೇಳಿದರು.

ಇಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಸೂಕ್ತ ಅನುದಾನವಿಲ್ಲದೆ ಜಿಲ್ಲೆಗೊಂದೊಂದು ವಿಶ್ವವಿದ್ಯಾಲಯ ಸ್ಥಾಪಿಸಿದ್ದು ತಪ್ಪು’ ಎಂದರು.

‘ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವಿದ್ದಾಗ ₹5 ಕೋಟಿ ನೀಡಿದವರಿಗೆ ಕುಲಪತಿ ಹುದ್ದೆ ಕೊಡಲಾಯಿತು. ಇದು ಬಹಿರಂಗ ಸತ್ಯ. ವಿದ್ಯೆಯನ್ನು ಮಾರಾಟಕ್ಕಿಟ್ಟ ಭ್ರಷ್ಟ ವ್ಯವಸ್ಥೆ ಈಗಲೂ ಮುಂದುವರಿದಿದೆ. ವಿದ್ಯಾರ್ಥಿಗಳ ಶುಲ್ಕದಲ್ಲಿ ವಿಶ್ವವಿದ್ಯಾಲಯ ನಡೆಯುವಂತಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.