ಮೈಸೂರು: ‘ದೆಹಲಿಯಲ್ಲಿ ಮೇ 24 ರಂದು ನಡೆಯುವ ಜನಜಾತಿ ಸಾಂಸ್ಕೃತಿಕ ಸಮಾಗಮದಲ್ಲಿ ದೇಶದ ಒಂದೂವರೆ ಲಕ್ಷ ಬುಡಕಟ್ಟು ಸಮುದಾಯದವರು ಪಾಲ್ಗೊಳ್ಳಲಿದ್ದಾರೆ. ಮೈಸೂರು ಜಿಲ್ಲೆಯಿಂದ ಸುಮಾರು 1,200 ಮಂದಿ ಭಾಗವಹಿಸಲಿದ್ದಾರೆ’ ಎಂದು ಗಿರಿಜನ ಸುರಕ್ಷಾ ವೇದಿಕೆ ಅಧ್ಯಕ್ಷ ಗಣೇಶ್ ಎಚ್.ಡಿ. ಕೋಟೆ ತಿಳಿಸಿದರು.

ಇಲ್ಲಿ ಈಚೆಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿ ಅಂಗವಾಗಿ ನಡೆಯುವ ಕಾರ್ಯಕ್ರಮದಲ್ಲಿ ದೇಶದ ವಿವಿಧ ಭಾಗಗಳಿಂದ ಸಮುದಾಯದ ಜನ ಭಾಗವಹಿಸಲಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಗೆ ದೆಹಲಿಯ ಐದು ಭಾಗಗಳಿಂದ ಶೋಭಾಯಾತ್ರೆ ಹೊರಡಲಿದೆ. ಇದರಲ್ಲಿ ಗಿರಿಜನರು ತಮ್ಮದೇ ಆದ ಉಡುಗೆ, ತೊಡುಗೆ, ವಾದ್ಯಗಳೊಂದಿಗೆ ಪಾಲ್ಗೊಳ್ಳಲಿದ್ದಾರೆ’ ಎಂದರು.

ಸಂಘಟನೆಯ ರಾಜು, ಕಾಮರಾಜ್, ದೇವವಾಜ್ ಟಿ.ಕಾಟೂರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-39-1563850908

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.