ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿಎಂ ಸಿದ್ದರಾಮಯ್ಯಗೆ ನೀಡಿದ ನೋಟಿಸ್ ವಾಪಸ್‌ಗೆ ಒತ್ತಾಯ

Published : 8 ಆಗಸ್ಟ್ 2024, 4:22 IST
Last Updated : 8 ಆಗಸ್ಟ್ 2024, 4:22 IST
ಫಾಲೋ ಮಾಡಿ
Comments

ಮೈಸೂರು: ‘ರಾಜ್ಯಪಾಲರು ಖಾಸಗಿ ವ್ಯಕ್ತಿ ನೀಡಿದ ದೂರು ಆಧರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಾರಿಗೊಳಿಸಿರುವ ಶೋಕಾಸ್ ನೋಟಿಸ್ ವಾಪಸ್‌ ಪಡೆಯಬೇಕು’ ಎಂದು ಕರ್ನಾಟಕ ರಾಜ್ಯ ದಸಂಸ ಜಿಲ್ಲಾ ಸಮಿತಿಯ ಸಂಚಾಲಕ ಭುಗತಗಹಳ್ಳಿ ಮಣಿಯಯ್ಯ ಒತ್ತಾಯಿಸಿದರು.

ಇಲ್ಲಿ ಪತ್ರಕರ್ತರೊಂದಿಗೆ ಬುಧವಾರ ಮಾತನಾಡಿದ ಅವರು, ‘ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯಕ್ಕಾಗಿ ನಿರಂತರವಾಗಿ ದುಡಿಯುತ್ತಿದ್ದು, ಅಹಿಂದ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದ್ದಾರೆ. ಎಲ್ಲ ವರ್ಗದವರಿಗೂ ಸವಲತ್ತು ನೀಡಿದ್ದಾರೆ. ಇದನ್ನು ಸಹಿಸದೆ ಬಿಜೆಪಿ– ಜೆಡಿಎಸ್‌ನವರು ಮುಡಾ ಹಗರಣದ ನೆಪದಲ್ಲಿ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಯತ್ನಿಸುತ್ತಿದ್ದಾರೆ. ಇದು ಖಂಡನೀಯ’ ಎಂದರು.

‘ತಾಲ್ಲೂಕಿನ ಕಸಬಾ ಹೋಬಳಿ ಕೆಸರೆಯಲ್ಲಿ ಮುಖ್ಯಮಂತ್ರಿ ಪತ್ನಿ ಪಾರ್ವತಿ ಅವರ ಹೆಸರಿನಲ್ಲಿದ್ದ ಜಮೀನನ್ನು ಸ್ವಾಧೀನಪಡಿಸಿಕೊಂಡ ಬಳಿಕ ಮುಡಾ ಬದಲಿ ನಿವೇಶನ ನೀಡಿರುವುದರಲ್ಲಿ ಅಕ್ರಮವೇನಿದೆ’ ಎಂದು ಪ್ರಶ್ನಿಸಿದರು.

‘ಮುಡಾ ಹಗರಣಕ್ಕೂ ಸಿದ್ದರಾಮಯ್ಯ ಅವರಿಗೂ ಸಂಬಂಧವಿಲ್ಲ. ಹೀಗಿದ್ದರೂ ಇಲ್ಲ ಸಲ್ಲದ ಸುಳ್ಳು ಹೇಳಿಕೊಂಡು ಅವರನ್ನು ಅಧಿಕಾರದಿಂದ ಕೆಳಗಿಳಿಸುವ ಯತ್ನ ಮುಂದುವರಿಸಿದರೆ ತೀವ್ರ ಹೋರಾಟ ನಡೆಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಮುಖಂಡರಾದ ಚಾ.ನಂಜುಂಡಮೂರ್ತಿ, ಆಲಗೂಡು ಎಂ. ಶಿವಣ್ಣ, ಬೊಕ್ಕಳ್ಳಿ ಲಿಂಗಯ್ಯ, ರತ್ನಮ್ಮ, ಸಣ್ಣಸ್ವಾಮಿ ಸರಗೂರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT