ಮೈಸೂರು: ‘ಭೋವಿ ಸಮಾಜಕ್ಕೆ ಸೇರಿದವರೊಬ್ಬರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಬೇಕು’ ಎಂದು ಕೆಪಿಸಿಸಿ ವಕ್ತಾರ ಜಿ.ವಿ. ಸೀತಾರಾಮು ಒತ್ತಾಯಿಸಿದರು.

ಇಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘45 ವರ್ಷಗಳಿಂದ ಭೋವಿ ಸಮುದಾಯ
ದವರನ್ನು ಕಾಂಗ್ರೆಸ್ನಿಂದ ಎಂಎಲ್ಸಿ ಮಾಡಿಲ್ಲ. ಹೀಗಾಗಿ ಈ ಬಾರಿ ಅವಕಾಶ ಕಲ್ಪಿಸಬೇಕು’ ಎಂದು ಕೋರಿದರು.

‘ಪರಿಶಿಷ್ಟ ಜಾತಿಯಲ್ಲಿ ಈ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ದ್ದೇವೆ. ಪಕ್ಷದ ಪರವಾಗಿ ಸಾಕಷ್ಟು ಕೆಲಸ ಮಾಡಿದ್ದು, ಕಳೆದ ಚುನಾವಣೆಯಲ್ಲಿ ಬೆಂಬಲಿಸಿದ್ದೇವೆ. ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಮುಖ್ಯಮಂತ್ರಿ ಆಗಿದ್ದಾಗ ನನ್ನನ್ನು ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದರು. ಅವರು ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ನಮ್ಮ ಸಮುದಾಯದ ಬಗ್ಗೆ ಒಲವಿದ್ದು, ನಮಗೆ ರಾಜಕೀಯ ಶಕ್ತಿ ತುಂಬಬೇಕು’ ಎಂದರು.

ಸಮಾಜದ ಮುಖಂಡರಾದ ಬಸವರಾಜು, ಪರಮೇಶ್, ರಾಮಸ್ವಾಮಿ, ದಾಸ್, ದೇವರಾಜ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.