ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಲಕಾಡು ಗಂಗರ ಅಧ್ಯಯನ ಕೇಂದ್ರ ಸ್ಥಾಪಿಸಿ: ಒಕ್ಕಲಿಗರ ಮಹಾಸಭಾ ಆಗ್ರಹ

Last Updated 31 ಜನವರಿ 2023, 15:38 IST
ಅಕ್ಷರ ಗಾತ್ರ

ಮೈಸೂರು: ‘ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ತಲಕಾಡು ಗಂಗರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಸ್ಥಾಪಿಸಬೇಕು’ ಎಂದು ಅಖಿಲ ಕರ್ನಾಟಕ ಒಕ್ಕಲಿಗರ ಮಹಾಸಭಾದ ಸಂಸ್ಥಾಪಕ ರಾಜ್ಯಾಧ್ಯಕ್ಷ ಎಸ್.ಬೆಟ್ಟೇಗೌಡ ಹಾಗೂ ಪ್ರಧಾನ ಕಾರ್ಯದರ್ಶಿ ಈ.ಸಿ.ನಿಂಗರಾಜ್‌ಗೌಡ ಆಗ್ರಹಿಸಿದ್ದಾರೆ.

ಈ ಬಗ್ಗೆ ಮನವಿ ಸಲ್ಲಿಸಿರುವ ಅವರು, ‘ರಾಜಮನೆತನಗಳ ಇತಿಹಾಸ, ಮಹಾಪುರುಷರ ಜೀವನ, ಸಾಧನೆ, ಹೋರಾಟದ ಬಗ್ಗೆ ಸಮಾಜಮುಖಿ ಅಧ್ಯಯನ ನಡೆಸಲು ಪ್ರತ್ಯೇಕ ಅಧ್ಯಯನ ವಿಭಾಗ ಅವಶ್ಯವಾಗಿದೆ. ಈ ಅಧ್ಯಯನಗಳಿಂದ ಮುಂದಿನ ತಲೆಮಾರಿಗೆ ಐತಿಹಾಸಿಕ ಮತ್ತು ಶೈಕ್ಷಣಿಕವಾಗಿ ಉತ್ತಮ ಸಂಶೋಧನಾತ್ಮಕ ಕೊಡುಗೆ ನೀಡುವುದು ಶಿಕ್ಷಣ ಸಂಸ್ಥೆಯ ಜವಾಬ್ದಾರಿಯಾಗಿದೆ’ ಎಂದು ಹೇಳಿದ್ದಾರೆ.

‘ಮುಕ್ತ ವಿಶ್ವವಿದ್ಯಾಲಯದಲ್ಲಿ ಈಗಾಗಲೇ ಹಲವು ಅಧ್ಯಯನ ವಿಭಾಗಗಳು ಕಾರ್ಯನಿರ್ವಹಿಸುತ್ತಿವೆ. ಅವುಗಳ ಜೊತೆ ಗಂಗರ ಅಧ್ಯಯನ ಕೇಂದ್ರವನ್ನೂ ಪ್ರಾರಂಭಿಸಬೇಕು’ ಎಂದು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT