ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ.ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಒತ್ತಾಯಿಸಿ ರಕ್ತದಲ್ಲಿ ಪತ್ರ

Last Updated 9 ಜುಲೈ 2021, 2:10 IST
ಅಕ್ಷರ ಗಾತ್ರ

ಮೈಸೂರು: ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡುವಂತೆ ಆಗ್ರಹಿಸಿ ಜಾಗೋ ಮೈಸೂರು ಅಧ್ಯಕ್ಷ ಚೇತನ್ ಮಂಜುನಾಥ್‌ ಅವರು ತಮ್ಮ ರಕ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎರಡು ಪುಟಗಳ ಪತ್ರ ಬರೆದಿದ್ದಾರೆ.

‘ತುಂಬಾ ದುಃಖವಾಗಿ ಈ ನಿರ್ಧಾರ ಕೈಗೊಂಡೆ. ನನ್ನ ಜನ್ಮದಿನದ ಅಂಗವಾಗಿ 5 ಮಿ.ಲೀ. ರಕ್ತವನ್ನು ಸಿರಿಂಜ್‌ನಲ್ಲಿ ಆರೋಗ್ಯ ಸಿಬ್ಬಂದಿ ಸಹಾಯದಿಂದ ತೆಗೆದು ಅದರಿಂದ ಈ ಪತ್ರ ಬರೆದಿದ್ದೇನೆ. ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದ ನಂತರ ತೃಣಮೂಲ ಕಾಂಗ್ರೆಸ್‌ ಕಾರ್ಯಕರ್ತರು ಮತ್ತು ಅಲ್ಲಿಯ ಮೂಲಭೂತವಾದಿಗಳು ಬಿಜೆಪಿ ಕಾರ್ಯಕರ್ತರು ಮತ್ತು ಅಮಾಯಕ ಹಿಂದೂಗಳ ಕೊಲೆ ಮಾಡಿದ್ದಾರೆ. ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಹಲವಾರು ಪ್ರಕರಣಗಳು ದಾಖಲಾಗಿವೆ. ಲಕ್ಷಕ್ಕೂ ಅಧಿಕ ಮಂದಿ ಪ್ರಾಣ ಭಯದಿಂದ ಪಕ್ಕದ ರಾಜ್ಯಗಳಿಗೆ ವಲಸೆ ಹೋಗಿದ್ದಾರೆ’ ಎಂದು ಅವರು ಪತ್ರದಲ್ಲಿ ಆರೋಪಿಸಿದ್ದಾರೆ.

‘ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ. ಅಲ್ಲಿಯ ಅಮಾಯಕ ಹಿಂದೂಗಳು ಮತ್ತು ಬಿಜೆಪಿ ಕಾರ್ಯಕರ್ತರ ರಕ್ಷಣೆ ಮಾಡಲು ರಾಷ್ಟ್ರಪತಿ ಆಳ್ವಿಕೆ ಒಂದೇ ಮಾರ್ಗವಾಗಿದೆ. ತನಿಖೆ ಚುರುಕುಗೊಳಿಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಸಂತ್ರಸ್ತರಿಗೆ ಪ್ಯಾಕೇಜ್‌ ಘೋಷಿಸಬೇಕು ಮತ್ತು ರಕ್ಷಣೆ ಒದಗಿಸಬೇಕು’ ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT