ಮೈಸೂರು: ‘ಸಾಮಾಜಿಕ ಜಾಲತಾಣದ ಪೋಸ್ಟ್ ಒಂದರಲ್ಲಿ ಸಮುದಾಯವನ್ನು ಅವಹೇಳನಕಾರಿಯಾಗಿ ಚಿತ್ರಿಸಲಾಗಿದೆ’ ಎಂದು ಆರೋಪಿಸಿ ಮುಸ್ಲಿಂ ಸಮುದಾಯದ ಸಾವಿರಾರು ಜನರು ಸೋಮವಾರ ರಾತ್ರಿ ಇಲ್ಲಿನ ಉದಯಗಿರಿ ಪೊಲೀಸ್ ಠಾಣೆ ಮುಂಭಾಗ ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿದ್ದಾರೆ.

ಪ್ರತಿಭಟನಾಕಾರರನ್ನು ನಿಯಂತ್ರಿಸುತ್ತಿದ್ದಾಗ ಕಲ್ಲು ತೂರಾಟ ನಡೆಸಿದ್ದು, ಪೊಲೀಸರು ಲಾಠಿ ಪ್ರಹಾರ ಮಾಡಿ, ಅಶ್ರುವಾಯು ಸಿಡಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದರು. ಈ ವೇಳೆ ಕೆಎಸ್ಆರ್ ಪಿ ಹಾಗೂ ಸಿಎಆರ್ ಪೊಲೀಸರಿಗೆ ಗಾಯಗಳಾಗಿದ್ದು, ಪೊಲೀಸ್ ವಾಹನದ ಗಾಜುಗಳು ಒಡೆದಿವೆ. ಕಲ್ಲು ಬಿಸಾಡಿದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮಂಗಳವಾರ ಠಾಣೆಯ ಸುತ್ತ ಪೊಲೀಸ್ ನಿಯೋಜಿಸಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.
.ಮೈಸೂರು | ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಪೋಸ್ಟ್: ಸುರೇಶ್ ವಶಕ್ಕೆ.ಗ್ವಾಟೆಮಾಲಾ | 115 ಅಡಿ ಎತ್ತರದ ಸೇತುವೆಯಿಂದ ಉರುಳಿದ ಬಸ್: 55 ಮಂದಿ ಸಾವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.