ಮೈಸೂರು: ಪ್ರಜಾವಾಣಿ, ಡೆಕ್ಕನ್ ಹೆರಾಲ್ಡ್ ಹಾಗೂ ಡೆಕ್ಕನ್ ಹೆರಾಲ್ಡ್ ಇನ್ ಎಜುಕೇಷನ್ (ಡಿಎಚ್ಐಇ) ವತಿಯಿಂದ ಇಲ್ಲಿನ ಸದ್ವಿದ್ಯಾ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಶನಿವಾರ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿರುವ ಚಿತ್ರಕಲಾ ಸ್ಪರ್ಧೆ ಆರಂಭಗೊಂಡಿದೆ.

ನಾರಾಯಣಶಾಸ್ತ್ರಿ ರಸ್ತೆಯ ಸದ್ವಿದ್ಯಾ ಶಾಲೆಯಲ್ಲಿ ಸ್ಪರ್ಧೆ ನಡೆಯುತ್ತಿದ್ದು, ವಿವಿಧ ಶಾಲೆಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ.

ಸ್ಪರ್ಧೆಯನ್ನು ಸದ್ವಿದ್ಯಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಂ.ಡಿ. ಗೋಪಿನಾಥ್, ಉಪಾಧ್ಯಕ್ಷ ಎಸ್.ಬಾಲಾಜಿ ಉದ್ಘಾಟಿಸಿದರು. ಮುಖ್ಯ ಶಿಕ್ಷಕ ರಾಮಚಂದ್ರ ಭಟ್, ಡೆಕ್ಕನ್ ಹೆರಾಲ್ಡ್ ಮೈಸೂರು ಬ್ಯೂರೋ ಮುಖ್ಯಸ್ಥ ಟಿ.ಆರ್.ಸತೀಶ್ ಕುಮಾರ್, ಟಿಪಿಎಂಎಲ್ ಪ್ರಸರಣ ವಿಭಾಗದ ಹಿರಿಯ ವ್ಯವಸ್ಥಾಪಕ ಎಸ್. ಪ್ರಕಾಶ್, ಚಿತ್ರಕಲಾ ಶಿಕ್ಷಕಿ ಚಂದ್ರಕಲಾ ಎಂ.ಎನ್. ಪಾಲ್ಗೊಂಡಿದ್ದರು.

ಕಿರಿಯರ ವಿಭಾಗದಲ್ಲಿ 4ರಿಂದ 7ನೇ ತರಗತಿ ಹಾಗೂ ಹಿರಿಯರ ವಿಭಾಗದಲ್ಲಿ 8ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಸ್ಪರ್ಧೆ ನಡೆಯುತ್ತಿದೆ. ವಿಜೇತರಿಗೆ ಮಧ್ಯಾಹ್ನ ಬಹುಮಾನ ವಿತರಿಸಲಾಗುವುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.