ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಜಿಟಲ್ ಜೀವನ್ ಪ್ರಮಾಣಪತ್ರ’ ಅಭಿಯಾನ

Last Updated 28 ನವೆಂಬರ್ 2022, 12:52 IST
ಅಕ್ಷರ ಗಾತ್ರ

ಮೈಸೂರು: ಇಲ್ಲಿನ ನ್ಯೂ ಸಯ್ಯಾಜಿರಾವ್‌ ರಸ್ತೆಯಲ್ಲಿರುವ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಶಾಖೆಯ ಆವರಣದಲ್ಲಿ ‘ಕೇಂದ್ರ ಸರ್ಕಾರದ ಪಿಂಚಣಿದಾರರಿಗೆ ‘ಡಿಜಿಟಲ್ ಜೀವನ್ ಪ್ರಮಾಣಪತ್ರ’ ಪ್ರಚಾರ ಅಭಿಯಾನ’ ಸೋಮವಾರ ನಡೆಯಿತು.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಹಾಗೂ ಪಿಂಚಣಿದಾರರ ಸಚಿವಾಲಯ ಹಾಗೂ ಪಿಂಚಣಿ ಮತ್ತು ‍ಪಿಂಚಣಿದಾರರ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಡಿಜಿಟಲ್ ಜೀವನ್ ಪ್ರಮಾಣಪತ್ರ’ ಪಡೆಯುವ ಬಗ್ಗೆ ಮಾರ್ಗದರ್ಶನ ನೀಡಲಾಯಿತು. ಸಿಬ್ಬಂದಿಯು ಪ್ರಾತ್ಯಕ್ಷಿಕೆಯ ಮೂಲಕ ತಿಳಿಸಿಕೊಟ್ಟರು.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಕ್ಷೇತ್ರ ಜನಸಂಪರ್ಕ ಕಾರ್ಯಾಲಯದ ಉಪ ನಿರ್ದೇಶಕಿ ಡಾ.ಟಿ.ಸಿ.ಪೂರ್ಣಿಮಾ ಮಾತನಾಡಿ, ‘ಪಿಂಚಣಿದಾರರು ಪ್ರತಿ ವರ್ಷ ಪ್ರಮಾಣಪತ್ರ (ಲೈಪ್ ಸರ್ಟಿಫಿಕೆಟ್‌) ಸಲ್ಲಿಸುವುದು ಕಡ್ಡಾಯವಾಗಿದೆ. ಈ ಸಂದರ್ಭದಲ್ಲಿ ಹಿರಿಯ ನಾಗರಿಕರಿಗೆ ಆಗುತ್ತಿದ್ದ ತೊಂದರೆಗಳನ್ನು ನಿವಾರಿಸುವುದಕ್ಕಾಗಿ ಆನ್‌ಲೈನ್‌ನಲ್ಲೇ ಸಲ್ಲಿಕೆಗೆ ಅವಕಾಶವನ್ನು ಈಗ ನೀಡಲಾಗಿದೆ. ಡಿಜಿಟಲ್ ಜೀವನ್ ಪ್ರಮಾಣಪತ್ರದ ಉಪಕ್ರಮವನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ತಿಳಿಸಿದರು.

ಎಸ್‌ಬಿಐ ಡಿಜಿಎಂ ರಾಜೇಶ್‌ಕುಮಾರ್‌ ಚೌಧರಿ,ಪಿಂಚಣಿ ಮತ್ತು ‍ಪಿಂಚಣಿದಾರರ ಕಲ್ಯಾಣ ಇಲಾಖೆಯ ಅಧಿಕಾರಿಗಳಾದ ಎಸ್.ಚಕ್ರವರ್ತಿ ಹಾಗೂ ಅಶೋಕ್‌ಕುಮಾರ್‌ ಸಿಂಗ್ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT