ಗುರುವಾರ, 21 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ಯಾರಂಟಿ| ಸಾಮಾನ್ಯರಿಗೆ ಉಚಿತ ನೋಂದಣಿ ಮಾಡಿ: ಸಚಿವ ದಿನೇಶ್ ಗುಂಡೂರಾವ್ ಸಲಹೆ

Published 28 ಜೂನ್ 2023, 6:27 IST
Last Updated 28 ಜೂನ್ 2023, 6:27 IST
ಅಕ್ಷರ ಗಾತ್ರ

ಮೈಸೂರು: ಕಾಂಗ್ರೆಸ್‌ ನಗರ ಮತ್ತು ಗ್ರಾಮಾಂತರ ಜಿಲ್ಲಾ‌ ಸಮಿತಿಯಿಂದ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಪಕ್ಷದ ಕಚೇರಿಯಲ್ಲಿ ಮಂಗಳವಾರ ಸನ್ಮಾನಿಸಲಾಯಿತು.

ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ‘ಗ್ರಾಮ ಒನ್‌ ಕೇಂದ್ರಗಳಲ್ಲಿ ಬಿಜೆಪಿಯವರೇ ತುಂಬಿದ್ದಾರೆ. ಗ್ಯಾರಂಟಿ ಯೋಜನೆಯ ನೋಂದಣಿಗಾಗಿ ತೆರಳುವಾಗ ಅವರು ತಪ್ಪು ಮಾಹಿತಿ ನೀಡಿದ ಘಟನೆಗಳೂ ನಡೆದಿವೆ. ಹೀಗಾಗಿ ಕಾರ್ಯಕರ್ತರು ಸಾರ್ವಜನಿಕರಿಗೆ ಉಚಿತ ನೋಂದಣಿ ಮಾಡಿಕೊಡಬೇಕು. ಜಿಲ್ಲೆಯಲ್ಲಿ ಉತ್ತಮ ಫಲಿತಾಂಶ ಬಂದಿದೆ. ಪಕ್ಷ ಕಟ್ಟುವ ಪರ್ವ ಕಾಲದಲ್ಲಿ ನಾವಿದ್ದೇವೆ’ ಎಂದು ತಿಳಿಸಿದರು.

‘108 ಆಂಬುಲೆನ್ಸ್‌ ಹಳೆಯ ಪದ್ಧತಿಯಲ್ಲೇ ಮುಂದುವರೆಯುತ್ತಿದೆ. ಮುಂದಿನ 3 ತಿಂಗಳಲ್ಲಿ ಹೊಸ ವ್ಯವಸ್ಥೆ ಜಾರಿ ಮಾಡುತ್ತೇವೆ. ಅಧಿಕಾರಿಗಳ ವರ್ಗಾವಣೆ ಬಗ್ಗೆಯೂ ಕಾರ್ಯಕರ್ತರಿಂದ ಬೇಡಿಕೆ ಇದೆ. ಸಾಧ್ಯವಾದ ಕಡೆ ಅದನ್ನೂ ಮಾಡುತ್ತೇನೆ’ ಎಂದು ಹೇಳಿದರು.

ಕಾಂಗ್ರೆಸ್ ನಗರ ಸಮಿತಿ ಅಧ್ಯಕ್ಷ ಆರ್.ಮೂರ್ತಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಶಿವಣ್ಣ, ಮುಖಂಡರಾದ ಸೂರಜ್ ಹೆಗ್ಡೆ, ರವಿಶಂಕರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT