ನರಸಿಂಹರಾಜಪುರ: ‘ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಒಬ್ಬ ಸಂಘಟನಾ ಚತುರ ಹಾಗೂ ಉತ್ತಮ ಆಡಳಿತಗಾರ’ ಎಂದು ಕಡಹಿನಬೈಲು ಗ್ರಾಮ ಪಂಚಾಯಿತಿ ಕಾಂಗ್ರೆಸ್ ಘಟಕದ ಅಧ್ಯಕ್ಷ ಕರಗುಂದ ನಂದೀಶ್ ಅಭಿಪ್ರಾಯಪಟ್ಟರು.

ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಬುಧವಾರ ಸಂಜೆ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ ಪ್ರಯುಕ್ತ ಶೆಟ್ಟಿಕೊಪ್ಪದಲ್ಲಿ ಕಾರ್ಯಕರ್ತರು ಆಯೋಜಿಸಿದ್ದ ವಿಜಯೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.

ಡಿಕೆಶಿ ಅವರು ಉಪ ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ರೈತರ ಅಭಿವೃದ್ಧಿಗೆ, ನೀರಾವರಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲಾ ವಿವಿಧ ಖಾತೆಗಳಲ್ಲಿ ಸಚಿವರಾಗಿ ದಕ್ಷ ಮತ್ತು ಉತ್ತಮ ಸೇವೆ ಸಲ್ಲಿಸಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ಕೊಡುಗೆ ಅಪಾರ. ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಅವರು ರಾಜ್ಯಕ್ಕೆ ಜನಪರವಾಗಿ, ಬಡವರ ಪರವಾಗಿ, ಅಹಿಂದ ವರ್ಗದ ಪರವಾಗಿ, ರೈತರ ಪರವಾಗಿ ಉತ್ತಮ ಆಡಳಿತ ನೀಡಲಿ ಎಂದು ಆಶಿಸಿದರು.

ಜಿಲ್ಲಾ ಎಸ್.ಸಿ, ಎಸ್.ಟಿ ದೌರ್ಜನ್ಯ ಜಾಗೃತಿ ಸಮಿತಿ ಸದಸ್ಯ ಎಂ. ಮಹೇಶ್ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ಸಂಕಷ್ಟ ಬಂದಾಗಲೆಲ್ಲಾ ಎದೆಕೊಟ್ಟು ನಿಲ್ಲುವ ನಾಯಕ ಡಿ.ಕೆ. ಶಿವಕುಮಾರ್. ತಮ್ಮ ರಾಜಕೀಯ ಎದುರಾಳಿಗಳನ್ನು ಮಾತಿನ ಮೂಲಕ ಕಟ್ಟಿಹಾಕುವ ನಾಯಕ. ಎಲ್ಲೂ ತಮ್ಮ ನಿಲುವುಗಳನ್ನು ಬದಲಿಸದೆ ರಾಜಿಯಾಗದ ನಾಯಕ. ಅಂಥವರಿಗೆ ಮುಖ್ಯಮಂತ್ರಿ ಸ್ಥಾನ ಸಿಕ್ಕಿರುವುದು ನಾಡಿನ ಜನರ ಸೌಭಾಗ್ಯವಾಗಿದೆ. ಇವರ ಅವಧಿಯಲ್ಲಿ ಹೊಸ ಹೊಸ ಯೋಜನೆಗಳನ್ನು ತಂದು ರಾಜ್ಯ ಅಭಿವೃದ್ಧಿಯಾಗುವಂತಾಗಲಿ ಎಂದರು.

ಶೆಟ್ಟಿಕೊಪ್ಪದ ಕಾಂಗ್ರೆಸ್ ಮುಖಂಡ ಎ.ಜಿ. ಬೆಳ್ಳಯ್ಯ ಗೌಡ, ಕಡಹಿನಬೈಲು ಕಾಂಗ್ರೆಸ್ ಬೂತ್ ಅಧ್ಯಕ್ಷ ಅಬ್ಧುಲ್ ರೆಹಮಾನ್, ಹಿರೇಬಿಸು ಬೂತ್ ಅಧ್ಯಕ್ಷ ಪಿ.ಟಿ. ಜೇಮ್ಸ್, ನೆರ್ಲೆಕೊಪ್ಪ ಬೂತ್ ಅಧ್ಯಕ್ಷ ಪರಮೇಶ್ವರ್, ಮುಖಂಡರಾದ ರವೀಂದ್ರ, ಎ.ಬಿ. ಚಂದ್ರಶೇಖರ್, ಎಂ. ಹಮೀದ್, ಚಂದ್ರೇಗೌಡ ಬಣಗಿ, ಎ.ಬಿ. ಪ್ರಶಾಂತ, ಡಿ.ಜಿ. ಜಗದೀಶ್, ಬಾಲರಾಜ್, ಎಂ.ಕೆ. ಶ್ರೀಧರ್, ಸುಲೇಮಾನ್, ಅಶ್ರಫ್, ಶಿವಣ್ಣ ಇದ್ದರು. ಪಟಾಕಿ ಸಿಡಿಸಿ ಸಂಭ್ರಮಾಚರಣೆ ಆಚರಿಸಲಾಯಿತು.

ಮೂಡಿಗೆರೆ: ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಹಾಗೂ ನೂತನ ಸಚಿವ ಸಂಪುಟದ ಸದಸ್ಯರು ಪ್ರಮಾಣವಚನ ಸ್ವೀಕರಿಸಿದ ಪ್ರಯುಕ್ತ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.

ಪ್ರಮಾಣವಚನ ಸಮಾರಂಭದ ನೇರಪ್ರಸಾರ ವೀಕ್ಷಣೆಗೆ ಕಾಂಗ್ರೆಸ್ ಕಚೇರಿ ಎದುರು ಎಲ್ಇಡಿ ಪರದೆ ಅಳವಡಿಸಲಾಗಿತ್ತು. ತಾಲ್ಲೂಕಿನ ವಿವಿಧ ಭಾಗಗಳಿಂದ ಬಂದಿದ್ದ ಕಾರ್ಯಕರ್ತರು ಕಾರ್ಯಕ್ರಮ ವೀಕ್ಷಿಸಿದರು.

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಕಾರ್ಯಕರ್ತರು ಜೈಘೋಷ ಮೊಳಗಿಸಿ ಹರ್ಷ ವ್ಯಕ್ತಪಡಿಸಿದರು. ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಿದ ಸಂದರ್ಭ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಎಚ್. ಸುರೇಂದ್ರ, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಬಿ.ಎಸ್. ಜಯರಾಮ್, ಕೆಪಿಸಿಸಿ ಸಂಯೋಜಕ ಎಂ.ಎಸ್. ಅನಂತ್, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಕ್ರಮ್, ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಇಮ್ರಾನ್, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಕಾರ್ಯದರ್ಶಿ ಉಮ್ಮರ್ ಬಣಕಲ್, ಕಾಂಗ್ರೆಸ್ ಹೋಬಳಿ ಘಟಕದ ಅಧ್ಯಕ್ಷ ಸುಬ್ರಹ್ಮಣ್ಯ ತ್ರಿಪುರ, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಸುರೇಶ್ ಜೈನ್, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಜಯಮ್ಮ, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಲ್ಪನಾ ಶ್ರೀನಿವಾಸ್ ಹಾಗೂ ಮುಖಂಡರಾದ ಷಣ್ಮುಖಾನಂದ, ಹರೀಶ್, ಅಹ್ಮದ್ ಭಾವ, ಮನೋಜ್ ಬೆಟ್ಟಗೆರೆ, ಜ್ಯೋತಿ ಸಾಲ್ದಾನ, ಅಬೂಬಕರ್, ರಮೇಶ್, ಮಂಜಯ್ಯ, ಯೋಗೀಶ್ ಬಿದರಹಳ್ಳಿ, ಶ್ರೀನಿವಾಸ್, ಜಾನಕಿ, ಶಿವಾನಂದ ಶಕ್ತಿನಗರ, ಸುಬ್ರಹ್ಮಣ್ಯ ಹಾಲೂರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-126-539321588

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.