ಮೈಸೂರು: ಆಸ್ಪತ್ರೆಗೆ ಬರುವ ರೋಗಿಗಳಿಂದ ಲಂಚ ಪಡೆದ ಆರೋಪದ ಮೇಲೆ ಇಲ್ಲಿನ ಶಾಂತಿನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಕೆ.ಪಿ. ಕೋಮಲಾ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಕೋಮಲಾ ಅವರು ರೋಗಿಗಳಿಂದ ಲಂಚ ಪಡೆಯುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇದನ್ನು ಆಧರಿಸಿ ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಪ್ರಸಾದ್ ತನಿಖೆ ಕೈಗೊಂಡು ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು.
ಲಂಚ ಪಡೆದದ್ದು ಮೇಲ್ನೋಟಕ್ಕೆ ಸಾಬೀತಾಗಿದ್ದು, ಇಲಾಖೆ ತನಿಖೆ ಬಾಕಿ ಇರಿಸಿ ಕೋಮಲಾ ಅವರನ್ನು ಸೇವೆಯಿಂದ ಅಮಾನತು ಮಾಡಿರುವುದಾಗಿ ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.