ಸೋಮವಾರ, 15 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪಿರಿಯಾಪಟ್ಟಣ | ವರದಕ್ಷಿಣೆ: ಆರೋಪಿಗಳ ಬಂಧನಕ್ಕೆ ಒತ್ತಾಯ

Published 25 ಜೂನ್ 2024, 15:30 IST
Last Updated 25 ಜೂನ್ 2024, 15:30 IST
ಅಕ್ಷರ ಗಾತ್ರ

ಪಿರಿಯಾಪಟ್ಟಣ: ‘ವರದಕ್ಷಿಣೆ ಕಿರುಕುಳ ಪ್ರಕರಣದ ಆರೋಪಿಗಳನ್ನು ಬಂಧಿಸದೆ ಪೊಲೀಸರ ನಿರ್ಲಕ್ಷ ವಹಿಸುತ್ತಿದ್ದಾರೆ’ ಎಂದು ದೂರುದಾರರಾದ ಸಹನಾ ಆರೋಪಿಸಿದ್ದಾರೆ.

ಪಟ್ಟಣದ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತಾಲ್ಲೂಕಿನ ಲಕ್ಷ್ಮಿಪುರ ಗ್ರಾಮದ ಸೋಮಶೇಖರ್ ಎಂಬವರನ್ನು ವಿವಾಹವಾಗಿದ್ದು, ನಂತರ ವರದಕ್ಷಿಣೆ ತರುವಂತೆ ಸೋಮಶೇಖರ್, ಅವರ ತಂದೆ ಈಶ್ವರಯ್ಯ, ತಾಯಿ ರಾಜಮ್ಮ, ಗಂಡನ ಸಹೋದರ ಶಿವಕುಮಾರ್, ಅತ್ತಿಗೆ ಲಕ್ಷ್ಮಿ ಅವರು ವರದಕ್ಷಿಣೆ ತರುವಂತೆ ದೈಹಿಕವಾಗಿ ಮಾನಸಿಕವಾಗಿ ಹಿಂಸೆ ನೀಡಿದ್ದಾರೆ’ ಎಂದು ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಆದರೆ ಪೊಲೀಸರು ಇದುವರೆಗೂ ಆರೋಪಿಗಳನ್ನು ಬಂಧಿಸಿದೆ ನಿರ್ಲಕ್ಷ ವಹಿಸಿದ್ದಾರೆ’ ಎಂದು ದೂರಿದರು.

‘ಕೂಡಲೇ ಆರೋಪಿಗಳನ್ನು ಬಂಧಿಸದಿದ್ದರೆ ಪಟ್ಟಣದ ಪೊಲೀಸ್ ಠಾಣೆ ಮುಂಭಾಗ ಮಹಿಳಾ ಸಂಘಟನೆಗಳ ಜೊತೆ ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಸಹನಾ ತಂದೆ ರಮೇಶ್, ಚಿಕ್ಕಪ್ಪ ಸೋಮಣ್ಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT