ಮೈಸೂರು: ದಸರಾ ಉದ್ಘಾಟನೆಗೆ ನನಗೆ ಸಿಕ್ಕ ಅವಕಾಶ ಕೋವಿಡ್ ವಿರುದ್ಧ ಹೋರಾಟದಲ್ಲಿ ತೊಡಗಿರುವ ಕೊರೊನಾ ವಾರಿಯರ್‌ಗಳಿಗೆ ಹಾಗೂ ವೈದ್ಯಕೀಯ ಕ್ಷೇತ್ರಕ್ಕೆ ಸಂದ ಗೌರವ ಎಂದು ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ್ದಾರೆ.

ನಾನು ಮೈಸೂರಿನಲ್ಲಿ ಪಿಯುಸಿ ಓದುವಾಗ ಸಯ್ಯಾಜಿ ರಾವ್ ರಸ್ತೆಯಲ್ಲಿ ನಿಂತು ಜಂಬೂಸವಾರಿ ವೀಕ್ಷಿಸುತ್ತಿದ್ದೆ. ಆದರೆ, ಬೆಟ್ಟದಲ್ಲಿ ನಡೆಯುವ ಉದ್ಘಾಟನೆ ಕಾರ್ಯಕ್ರಮ ವೀಕ್ಷಿಸಿರಲಿಲ್ಲ. ಈಗ ಉದ್ಘಾಟನೆಗೆ ಅವಕಾಶ ಲಭಿಸಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಕೋವಿಡ್ ಪರಿಸ್ಥಿತಿಯಲ್ಲಿ ದಸರಾ ನಡೆಯುತ್ತಿದೆ. ಹೀಗಾಗಿ, ಸಾರ್ವಜನಿಕರು ಸರ್ಕಾರದೊಂದಿಗೆ ಕೈ ಜೋಡಿಸಿ ಸಹಕರಿಸಬೇಕು. ತಾಂತ್ರಿಕ ಸಲಹಾ ಸಮಿತಿ ನೀಡಿರುವ ಸಲಹೆಗಳನ್ನು ಪಾಲಿಸಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ... ಜಯದೇವ ಆಸ್ಪತ್ರೆ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್ ಅವರಿಂದ ದಸರಾ ಉದ್ಘಾಟನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.