ಮೈಸೂರು:ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿರುವ ಆನೆಗಳು ಸಾಂಸ್ಕೃತಿಕ ನಗರಿಯತ್ತ ಪ್ರಯಾಣ ಬೆಳೆಸಿದವು.

ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ವೀರನಹೊಸಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಸೋಮವಾರ ಆಯೋಜಿಸಿದ್ದ ಗಜಪಯಣ ಕಾರ್ಯಕ್ರಮ ಸರಳವಾಗಿ ನಡೆಯಿತು..

ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುವ ಅಭಿಮನ್ಯು ಸೇರಿದಂತೆ ಎಂಟು ಆನೆಗಳಿಗೆಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರು ಪೂಜೆ ಸಲ್ಲಿಸಿ ಚಾಲನೆ ನೀಡಿದರು.ವಿವಿಧ ಶಿಬಿರಗಳಿಂದ ವೀರನಹೊಸಹಳ್ಳಿ ಗ್ರಾಮದಲ್ಲಿ ಬೀಡುಬಿಟ್ಟಿದ್ದ ಆನೆಗಳನ್ನು ಸಿಂಗರಿಸಲಾಗಿತ್ತು.

ಅಭಿಮನ್ಯು ಜೊತೆಗೆ ಅಶ್ವತ್ಥಾಮ, ಧನಂಜಯ, ವಿಕ್ರಮ, ಕಾವೇರಿ, ಚೈತ್ರಾ, ಲಕ್ಷ್ಮಿ ಮತ್ತು ಗೋಪಾಲಸ್ವಾಮಿ ಆನೆಗಳು ಈ ಬಾರಿ ಭಾಗಿಯಾಗಲಿವೆ.ಕಾರ್ಯಕ್ರಮದಲ್ಲಿ ಸಂಸದ ಪ್ರತಾಪ ಸಿಂಹ, ಹುಣಸೂರು ಶಾಸಕ ಎಚ್.ಪಿ.ಮಂಜುನಾಥ್, ಜಿಲ್ಲಾ ಪಂಚಾಯಿತಿ ಸಿಇಒ ಎ.ಎಂ.ಯೋಗೀಶ್, ಎಸ್ ಪಿ ಆರ್.ಚೇತನ್, ಮೇಯರ್ ಸುನಂದಾ ಫಾಲನೇತ್ರ ಪಾಲ್ಗೊಂಡರು.

ಸೆ.16ಕ್ಕೆ ಅರಮನೆಗೆ ಸ್ವಾಗತ

ಕಾಡಿನಿಂದ ಬಂದ ಈ ಆನೆಗಳು ಮೈಸೂರಿನ ಅರಣ್ಯ ಭವನದಲ್ಲಿ ತಂಗಲಿವೆ.ಗಜಪಡೆಯನ್ನು ಸೆ.16 ರಂದು ಬೆಳಿಗ್ಗೆ 8.36ಕ್ಕೆ ಅರಮನೆಗೆ ಸ್ವಾಗತಿಸಲಾಗುತ್ತದೆ.ಈ ಬಾರಿಯ ದಸರಾ ಅ.7 ರಿಂದ 15 ರ ವರೆಗೆ ನಡೆಯಲಿದೆ. ಕೋವಿಡ್ ಕಾರಣ ಸರಳವಾಗಿ ನಡೆಯಲಿದ್ದು, ಕಾರ್ಯಕ್ರಮಗಳು ಚಾಮುಂಡಿ ಬೆಟ್ಟ ಹಾಗೂ ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಿರಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.