‘ಎರಡನೇ ತಂಡದಲ್ಲಿ 5 ಆನೆಗಳಿರಲಿದ್ದು, 4 ಆನೆಗಳನ್ನು ತುರ್ತು ಸನ್ನಿವೇಶಗಳಿಗೆ ಮೀಸಲಿರಿಸಲಾಗಿದೆ. ಆ.12ರಂದು ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದ ಜಿಕೆವಿಕೆ ಆವರಣದಲ್ಲಿ ಮಾನವ – ಆನೆ ಸಂಘರ್ಷ ನಿರ್ವಹಣೆ ಕುರಿತ ಅಂತರರಾಷ್ಟ್ರೀಯ ಸಮಾವೇಶ ನಡೆಯಲಿದ್ದು, ಅಂದು ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ದಸರಾ ಉನ್ನತ ಮಟ್ಟದ ಸಭೆಯೂ ನಡೆಯಲಿದೆ’ ಎಂದು ತಿಳಿಸಿದರು.