ಮೈಸೂರು: ‘ಲೋಕಸಭೆ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ ನಡೆಸಲಿದೆ. ಅವರು ನೀಡುವ ಶಿಫಾರಸಿನ ಅನ್ವಯ ಕಾನೂನಿನ ಕ್ರಮ ಕೈಗೊಳ್ಳಲಾಗುವುದು’ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಲ್ಲಿ ಶನಿವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು ‘ಪರಿಶೀಲನಾ ಕಾರ್ಯವನ್ನು ತ್ವರಿತವಾಗಿ ನಡೆಸಿ ವರದಿ ನೀಡಲು ಅಡ್ವೊಕೇಟ್ ಜನರಲ್ ಅವರಿಗೆ ಸೂಚನೆ ನೀಡಲಾಗುವುದು. ಆದರೆ ಮತದಾರರ ಪಟ್ಟಿಯ ಸಂಬಂಧ ಸಂಪೂರ್ಣ ಅಧಿಕಾರವಿರುವುದು ಚುನಾವಣಾ ಆಯೋಗಕ್ಕೆ’ ಎಂದರು.

‘ರಾಹುಲ್ ಗಾಂಧಿಯವರು ಮಾಧ್ಯಮಗಳಲ್ಲಿ ಪ್ರದರ್ಶನ ಮಾಡಿದ್ದು ನಿಜ. ಬಿಜೆಪಿಯವರು ತಪ್ಪು ಮಾಡಿ ಸುಳ್ಳು ಹೇಳುತ್ತಿದ್ದಾರೆ. ನಾವು ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಹದಿನಾರು ಸ್ಥಾನಗಳನ್ನು ಗೆಲ್ಲುವೆವು ಎಂದು ಆಂತರಿಕ ಸಮೀಕ್ಷೆ ತಿಳಿಸಿತ್ತು ಆದರೆ ನಾವು ಗೆದ್ದದ್ದು 9 ಸ್ಥಾನಗಳನ್ನು ಮಾತ್ರ. ರಾಹುಲ್ ಗಾಂಧಿ ಸಾಕ್ಷಿ ಸಮೇತ ಎಲ್ಲ ವಿಚಾರಗಳನ್ನು ತಿಳಿಸಿದ್ದಾರೆ. ಈ ಎಲ್ಲ ದಾಖಲೆಗಳು ರಾಜ್ಯ ಮತ್ತು ಕೇಂದ್ರ ಚುನಾವಣಾ ಆಯೋಗದ ಬಳಿ ಲಭ್ಯವಿದೆ. ಒಂದೇ ಸಣ್ಣ ಕೊಠಡಿಯಲ್ಲಿ 80 ಜನ ವಾಸ ಮಾಡಲು ಸಾಧ್ಯವೇ’ ಎಂದು ಪ್ರಶ್ನಿಸಿದರು.

ಚುನಾವಣಾ ಆಯೋಗದ ಬಗ್ಗೆ ಜನರಲ್ಲಿ ವಿಶ್ವಾಸ ಮೂಡಿಸಲು ನ್ಯಾಯಾಂಗದ ಮಧ್ಯಪ್ರವೇಶ ಕುರಿತು ಪ್ರತಿಕ್ರಿಯಿಸಿ, ‘ಚುನಾವಣೆಗಳಲ್ಲಿ, ಇವಿಎಂಗಳಲ್ಲಿ, ಮತದಾರರ ಪಟ್ಟಿಗಳಲ್ಲಿ ಕೈವಾಡ ನಡೆಯುತ್ತಿದೆ ಎಂದು ನಾವು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇವೆ’ ಎಂದರು.

ಮತ ಖರೀದಿ ಬಗ್ಗೆ ತಿಳಿದಿಲ್ಲ

‘ಸಿದ್ದರಾಮಯ್ಯ ಅವರು ಬಾದಾಮಿ ಕ್ಷೇತ್ರದಲ್ಲಿ ಮೂರು ಸಾವಿರ ಮತಗಳನ್ನು ಖರೀದಿ ಮಾಡಿ ಗೆದ್ದದ್ದು’ ಎಂಬ ಸಿ.ಎಂ. ಇಬ್ರಾಹಿಂ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಇಬ್ರಾಹಿಂ ನಮ್ಮ ಪಕ್ಷದವರಲ್ಲ. ನಾನು ನಾಮನಿರ್ದೇಶನ ಸಲ್ಲಿಸಲು ಹಾಗೂ ಪ್ರಚಾರಕ್ಕಾಗಿ ಬಾದಾಮಿಗೆ ಹೋಗಿದ್ದೆ. ಅದು ಬಿಟ್ಟರೆ ನನಗೆ ಏನೂ ಗೊತ್ತಿಲ್ಲ. ನಾನು 1,600 ಮತಗಳಿಂದ ಗೆದ್ದಿದ್ದು. ಈ ವಿಚಾರ ನನಗೆ ಹೊಸದು, ಈ ಬಗ್ಗೆ ಗೊತ್ತಿಲ್ಲ’ ಎಂದರು.

‘ವರುಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಸತ್ತವರೆಲ್ಲಾ ಮತ ಹಾಕಿ ನನ್ನನ್ನು ಗೆಲ್ಲಿಸಿದರು ಎಂದು ನಾನು ಹೇಳಿಲ್ಲ. ಒಂದು ವೇಳೆ ಸತ್ತವರು ಮತ ಹಾಕಿದ್ದರೆ ಅದಕ್ಕೆ ಚುನಾವಣಾ ಆಯೋಗ ನೇರ ಹೊಣೆ’ ಎಂದರು.
.ಲಕ್ಷ ಮತ ಕಳವು: ಮಹದೇವಪುರ ಕ್ಷೇತ್ರದ ದಾಖಲೆ ಬಿಡುಗಡೆ ಮಾಡಿದ ರಾಹುಲ್.ಇದು ಮಾಡು ಇಲ್ಲವೇ ಮಡಿ ಹೋರಾಟ | ಮತ ಕಳವು ತನಿಖೆ ಮಾಡಿ: ರಾಹುಲ್ ಗಾಂಧಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.