ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ್ತೆ ಮೂವರು ‘ಚುನಾವಣಾ ರಾಯಭಾರಿ’ ನೇಮಕ

ಕೃಪಾಕರ –ಸೇನಾನಿ, ತನಿಷ್ಕಾ ಮೂರ್ತಿ
Published 25 ಮಾರ್ಚ್ 2024, 16:27 IST
Last Updated 25 ಮಾರ್ಚ್ 2024, 16:27 IST
ಅಕ್ಷರ ಗಾತ್ರ

ಮೈಸೂರು: ಜಿಲ್ಲೆಯಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಮತ್ತೆ ಮೂವರನ್ನು ಚುನಾವಣಾ ರಾಯಭಾರಿಗಳನ್ನಾಗಿ ನೇಮಕ ಮಾಡಿಕೊಳ್ಳಲಾಗಿದೆ.

‘ಲೋಕಸಭಾ ಸಾರ್ವತ್ರಿಕ ಚುನಾವಣೆ– 2024ರ ಸಂಬಂಧ ಕೈಗೊಂಡಿರುವ ಸ್ವೀಪ್‌ (ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣೆಯಲ್ಲಿ ಪಾಲ್ಗೊಳ್ಳುವಿಕೆ) ಚಟುವಟಿಕೆಗಳಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ವ್ಯಕ್ತಿಗಳನ್ನು ರಾಯಭಾರಿಗಳನ್ನಾಗಿ ಮುಖ್ಯ ಚುನಾವಣಾಧಿಕಾರಿಗಳು ಆಯ್ಕೆ ಮಾಡಿದ್ದಾರೆ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷೆ ಕೆ.ಎಂ. ಗಾಯಿತ್ರಿ ತಿಳಿಸಿದ್ದಾರೆ.

‘ಅಂತರರಾಷ್ಟ್ರೀಯ ವನ್ಯಜೀವಿ ಛಾಯಾಗ್ರಾಹಕರಾದ ಬಿ.ಎಸ್. ಕೃಪಾಕರ ಹಾಗೂ ಕೆ.ಸೇನಾನಿ ಮತ್ತು ರೂಪದರ್ಶಿ ತನಿಷ್ಕಾ ಮೂರ್ತಿ ಅವರನ್ನು ಆಯ್ಕೆ ಮಾಡಲಾಗಿದೆ. ಅವರು ಜಿಲ್ಲಾಡಳಿತದಿಂದ ಕೈಗೊಳ್ಳುವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಮತದಾರರಲ್ಲಿ ಅರಿವು ಮೂಡಿಸಲು ಜಿಲ್ಲಾಡಳಿತದೊಂದಿಗೆ ಕೈಜೋಡಿಸಲಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

ಈಗಾಗಲೇ, ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಹಾಗೂ ಪ್ಯಾರಾಅಥ್ಲೆಟಿಕ್ಸ್ ಆಟಗಾರ ಮಹೇಂದ್ರ ಎಂ. ಅವರನ್ನು ನೇಮಕಕ್ಕೆ ಮಾಡಿಕೊಳ್ಳಲಾಗಿತ್ತು. ಇದರೊಂದಿಗೆ ಈವರೆಗೆ ಐವರನ್ನು ಆಯ್ಕೆ ಮಾಡಿಕೊಂಡಂತಾಗಿದೆ.

ತನಿಷ್ಕಾ ಮೂರ್ತಿ

ತನಿಷ್ಕಾ ಮೂರ್ತಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT