ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್ ಶಾರ್ಟ್ ಸರ್ಕ್ಯೂಟ್, ಕಬ್ಬಿನ ಗದ್ದೆಗೆ ಬೆಂಕಿ

Published 30 ಏಪ್ರಿಲ್ 2024, 14:39 IST
Last Updated 30 ಏಪ್ರಿಲ್ 2024, 14:39 IST
ಅಕ್ಷರ ಗಾತ್ರ

ನಂಜನಗೂಡು: ತಾಲ್ಲೂಕಿನ ಮಡುವಿನಹಳ್ಳಿಯಲ್ಲಿ ಮಂಗಳವಾರ ಶಶಿಕುಮಾರ್ ಎಂಬುವವರ ಕಬ್ಬಿನ ಗದ್ದೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿ ಬೆಳೆ ನಾಶವಾಗಿದೆ.

ಶಶಿಕುಮಾರ್ ಅವರ ಜಮೀನಿನಲ್ಲಿ ವಿದ್ಯುತ್ ಪರಿವರ್ತಕ ಅಳವಡಿಸಲಾಗಿದ್ದು, ಪರಿವರ್ತಕದಿಂದ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಕಬ್ಬಿಗೆ ತಾಗಿದ ಪರಿಣಾಮ ಸುಮಾರು ಮೂರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬು, ಡ್ರಿಪ್ ಪೈಪ್ ಸೇರಿದಂತೆ ಹಲವು ಕೃಷಿ ಉಪಕರಣಗಳು ಸುಟ್ಟು ನಾಶವಾಗಿದೆ.

ಏಳು ಲಕ್ಷದವರೆಗೆ ನಷ್ಟ ಉಂಟ್ಟಾಗಿದೆ. ಸರ್ಕಾರ ಸೂಕ್ತ ಪರಿಹಾರವನ್ನು ನೀಡಬೇಕೆಂದು ರೈತ ಶಿವಕುಮಾರ್ ಒತ್ತಾಯಿಸಿದ್ದಾರೆ.

ಅಗ್ನಿಶಾಮಕದಳ ಘಟನಾ ಸ್ಥಳಕ್ಕೆ ಬರುವ ವೇಳೆಗಾಗಲೇ ಕಬ್ಬು ಬೆಳೆ ಸುಟ್ಟು ಭಸ್ಮವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT