ಮೈಸೂರು: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಸೆಸ್ಕ್) ಸೇರಿದಂತೆ ರಾಜ್ಯದ ಎಲ್ಲ ವಿದ್ಯುತ್ ಸರಬರಾಜು ಕಂಪನಿಗಳು ಎಲ್ಲ ವರ್ಗದ ವಿದ್ಯುತ್ ಗ್ರಾಹಕರಿಗೆ ಪ್ರತಿ ಯೂನಿಟ್ಗೆ ಕಡ್ಡಾಯ ಶುಲ್ಕ 30 ಪೈಸೆ ಸೇರಿ ಒಟ್ಟು 68 ಪೈಸೆ ಏರಿಕೆ ಮಾಡುವಂತೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ (ಕೆಇಆರ್ಸಿ) ಅರ್ಜಿ ಸಲ್ಲಿಸಿವೆ.

‘ಜನರು ಈಗಾಗಲೇ ಹಾಲು, ಬಸ್ ಪ್ರಯಾಣ ದರ ಏರಿಕೆ ಮೊದಲಾದವುಗಳಿಂದ ತೊಂದರೆ ಅನುಭವಿಸುತ್ತಿದ್ದಾರೆ. ಹೀಗಿರುವಾಗ, ವಿದ್ಯುತ್ ದರ ಏರಿಕೆಗೆ ಸೆಸ್ಕ್ ಅರ್ಜಿ ಸಲ್ಲಿಸಿರುವುದು ಖಂಡನಾರ್ಹ’ ಎಂದು ಮೈಸೂರು ಕೈಗಾರಿಕೆಗಳ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ಕುಮಾರ್ ಜೈನ್ ಹೇಳಿದ್ದಾರೆ.

‘ಅನಗತ್ಯ ವೆಚ್ಚಗಳ ಏರಿಕೆ, ಖರೀದಿಯಲ್ಲಿ ರಾಜಕೀಯ ಹಸ್ತಕ್ಷೇಪ, ಸರ್ಕಾರದ ಸಂಸ್ಥೆಗಳಿಂದ ಬರಬೇಕಾದ ಕೋಟ್ಯಂತರ ರೂಪಾಯಿ ವಿದ್ಯುತ್ ಬಿಲ್ ಬಾಕಿ ವಸೂಲಿ ಮಾಡುವಲ್ಲಿ ವಿಫಲವಾಗಿರುವುದು, ನೀರಾವರಿ ಪಂಪ್ಸೆಟ್ಗಳಿಗೆ ಮಾಪಕರಹಿತ ವಿದ್ಯುತ್ ಪೂರೈಕೆ, ವಿದ್ಯುತ್ ವಿತರಣೆಯಲ್ಲಿನ ನಷ್ಟ ತಡೆಯದಿರುವುದು ದರ ಏರಿಕೆಗೆ ಕಾರಣವಾಗಿದೆ. ಈ ಬಗ್ಗೆ ಎಲ್ಲ ವರ್ಗದ ವಿದ್ಯುತ್ ಗ್ರಾಹಕರು ವಿಶೇಷವಾಗಿ ಕೈಗಾರಿಕೆ ಮತ್ತು ವಾಣಿಜ್ಯೋದ್ಯಮ ಗ್ರಾಹಕರು 6 ಪ್ರತಿಗಳಲ್ಲಿ ಕೆಇಆರ್ಸಿಗೆ ತಕರಾರು ಅರ್ಜಿ ಸಲ್ಲಿಸುವುದು ಅನಿವಾರ್ಯವಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

‘ಫೆ.19ರಂದು ಬೆಳಿಗ್ಗೆ 11ಕ್ಕೆ ಕೆಇಆರ್ಸಿಯು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಾರ್ವಜನಿಕ ವಿಚಾರಣೆ ನಡೆಸಲಿದ್ದು, ಸಾರ್ವಜನಿಕರು ಲಿಖಿತ ಮತ್ತು ಮೌಖಿಕವಾಗಿಯೂ ತಕರಾರು ಸಲ್ಲಿಸಬಹುದು’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.