ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಂತರಸಂತೆ: ಹೆಣ್ಣಾನೆ ಕಳೇಬರ ಪತ್ತೆ

Published 18 ಜೂನ್ 2024, 15:35 IST
Last Updated 18 ಜೂನ್ 2024, 15:35 IST
ಅಕ್ಷರ ಗಾತ್ರ

ಎಚ್.ಡಿ.ಕೋಟೆ: ತಾಲ್ಲೂಕಿನ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಅಂತರಸಂತೆ ವಲಯದ ಗೋಪಾಲದೇವರ ಗುಡಿ ಬಳಿ 25 ವರ್ಷದ ಹೆಣ್ಣಾನೆ ಕಳೇಬರ ಮಂಗಳವಾರ ಪತ್ತೆಯಾಗಿದೆ.

‘ಸಹಜ ಸಾವಾಗಿದೆಯೆಂದು ಮೇಲ್ನೋಟಕ್ಕೆ ಕಂಡುಬಂದಿದೆ. ಪ್ರಯೋಗಾಲಯಕ್ಕೆ ಬಿಡಿಭಾಗ ಕಳುಹಿಸಲಾಗಿದೆ. ಕಳೇಬರವನ್ನು ವನ್ಯಪ್ರಾಣಿಗಳ ಆಹಾರಕ್ಕೆ ಬಿಡಲಾಗಿದೆ’ ಎಂದು ಪಶು ವೈದ್ಯಾಧಿಕಾರಿ ಡಾ.ಬಿ.ಬಿ.ಪ್ರಸನ್ನ ತಿಳಿಸಿದ್ದಾರೆ.

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕ ಹರ್ಷಕುಮಾರ್ ಚಿಕ್ಕನರಗುಂದ, ಆರ್‌ಎಫ್‌ಒ ಡಿ.ಭರತ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT